image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಸುಹಾಸ್ ಶೆಟ್ಟಿ ಹತ್ಯೆ ಕೇಸ್: NIA ತನಿಖೆಗೆ ಆದೇಶಿಸಿದ ಕೇಂದ್ರ ಸರ್ಕಾರ

ಸುಹಾಸ್ ಶೆಟ್ಟಿ ಹತ್ಯೆ ಕೇಸ್: NIA ತನಿಖೆಗೆ ಆದೇಶಿಸಿದ ಕೇಂದ್ರ ಸರ್ಕಾರ

ನವದೆಹಲಿ : ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ (32) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮಹತ್ವದ ಬೆಳವಣಿಗೆ ನಡೆದಿದ್ದು, ಕೇಂದ್ರ ಗೃಹ ಸಚಿವಾಲಯದ ನಿರ್ದೇಶನದಂತೆ ಎನ್ ಐಎ ತನಿಖೆಗೆ ವಹಿಸಿ ಆದೇಶ ಹೊರಡಿಸಿದೆ.

ಮಂಗಳೂರಿನಲ್ಲಿ ನಡೆದಿದ್ದ ಸುಹಾಸ್ ಶೆಟ್ಟಿ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದು ಮಾತ್ರವಲ್ಲ ರಾಜಕೀಯ ಸಂಘರ್ಷಕ್ಕೂ ಕಾರಣವಾಗಿತ್ತು. ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಬೇಕು ಎಂದು ಬಿಜೆಪಿ ಕಾರ್ಯಕರ್ತರು, ನಾಯಕರು ರಾಜ್ಯಾದ್ಯಂತ ಪಟ್ಟು ಹಿಡಿದು ಪ್ರತಿಭಟನೆ ಮಾಡಿದ್ದರು. ಪ್ರಕರಣದ ಸಂಬಂಧ ಈಗಾಗಲೇ ಪೊಲೀಸರು 11 ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.

Category
ಕರಾವಳಿ ತರಂಗಿಣಿ