ಮಂಗಳೂರು: ಶ್ರೀ ಗಣೇಶೋತ್ಸವ ಸಂದರ್ಭದಲ್ಲಿ ವಿದ್ಯುತ್ ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಹಾಗೂ ವಿದ್ಯುತ್ ಅವಘಡಗಳಿಗೆ ಆಸ್ಪದವಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಪ್ರಕಟನೆಯಲ್ಲಿ ತಿಳಿಸಿದೆ.
ಸಾರ್ವಜನಿಕ ಗಣೇಶೋತ್ಸವ ಆಚರಣೆ ಸಂದರ್ಭದಲ್ಲಿ ವಿದ್ಯುತ್ ಲೈನ್‌ಗಳಿಂದ ಅನಧಿಕೃತವಾಗಿ ವಿದ್ಯುತ್ ಸಂಪಕ೯ ಪಡೆಯಬಾರದು. ಸಂಬಂಧಪಟ್ಟ ಮೆಸ್ಕಾಂ ಉಪವಿಭಾಗೀಯ ಅಥವಾ ಶಾಖಾ ಕಚೇರಿಗೆ ತೆರಳಿ ಅನುಮತಿ ಪಡೆಯಬೇಕು.ಗಣೇಶ ಪ್ರತಿಷ್ಠಾಪನೆ ಮಾಡುವ ಸ್ಥಳದ ಸುತ್ತಮುತ್ತ ಯಾವುದೇ ವಿದ್ಯುತ್ ಮಾರ್ಗಗಳಿಲ್ಲದಿರುವುದನ್ನು ಖಚಿತಪಡಿಸಿಕೊಳ್ಳಬೇಕು. ವಿದ್ಯುತ್ ಲೈನ್‌ನ ಕೆಳಗೆ ಅಥವಾ ಅಕ್ಕಪಕ್ಕದಲ್ಲಿ ಪೆಂಡಾಲ್ ಅಥವಾ ಶಾಮಿಯಾನ ಹಾಕಬಾರದು.
ಸುರಕ್ಷತೆಯ ಅಂತರವನ್ನು ಕಾಯ್ದುಕೊಂಡು ಪೆಂಡಾಲ್, ಶಾಮಿಯಾನ ಹಾಕಬೇಕು.ವಿದ್ಯುತ್ ಕಂಬಗಳು, ವಿದ್ಯುತ್ ಪರಿವರ್ತಕಗಳಿಗೆ ಬ್ಯಾನರ್ ಮತ್ತು ಫಲಕಗಳನ್ನು ಕಟ್ಟಬಾರದು. ಗಣೇಶ ವಿಗ್ರಹ ವಿಸರ್ಜನೆ ದಿನವೂ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಶೋಭಾಯಾತ್ರೆ ವಾಹನಗಳಿಗೆ ವಿದ್ಯುತ್ ತಂತಿಗಳು ತಾಗುವ ರೀತಿಯಲ್ಲಿ ಅತೀ ಎತ್ತರದ ಧ್ವಜ ಆಥವಾ ಇತರ ಅಲಂಕಾರಿಕ ಸಾಧನಗಳನ್ನು ಕಟ್ಟಬಾರದು. ಯಾವುದೇ ವಿದ್ಯುತ್ ಅವಘಡಗಳು ಸ೦ಭವಿಸಿದಲ್ಲಿ ಮೆಸ್ಕಾಂ ತುತು೯ ದೂರವಾಣಿ ಸ೦ಖ್ಯೆ 8277883388 ಆಥವಾ 0824-2950953 ಸಂಪಕಿ೯ಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ಕೋರಿದೆ
ವಿದ್ಯುತ್ ಅವಘಡಗಳನ್ನು ತಪ್ಪಿಸಲು ಹೆಚ್ಚಿನ ಜಾಗ್ರತೆ ವಹಿಸುವುದು ಅತ್ಯಗತ್ಯ. ಗಣೇಶನ ವಿಗ್ರಹಗಳ ವಿಸರ್ಜನಾ ಮೆರವಣೆಗೆ ನಡೆಯುವ ಬೀದಿಗಳಲ್ಲಿ ವಿದ್ಯುತ್ ಲೈನ್‌ಗಳ ಅಡಚಣೆ ಇದ್ದಲ್ಲಿ ಸಂಬಂಧಿಸಿದ ಮೆಸ್ಕಾಂ ಕಚೇರಿಯ ಗಮನಕ್ಕೆ ತರಬೇಕು. ಅಂತಹ ವಿದ್ಯುತ್ ಮಾರ್ಗಗಳಲ್ಲಿ ವಿದ್ಯುತ್ ಪೂರೈಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ, ಗಣೇಶ ವಿಸರ್ಜನೆಗೆ ಅನುಕೂಲ ಮಾಡಿಕೊಡಲು ಮೆಸ್ಕಾಂ ಸನ್ನದ್ದವಾಗಿದೆ.
- ಡಿ ಪದ್ಮಾವತಿ ವ್ಯವಸ್ಥಾಪಕ ನಿರ್ದೇಶಕರು, ಮೆಸ್ಕಾಂ