image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಅಸ್ಪೃಶ್ಯತೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕಿದೆ: ಮೋಹನ್​ ಭಾಗವತ್

ಅಸ್ಪೃಶ್ಯತೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕಿದೆ: ಮೋಹನ್​ ಭಾಗವತ್

ಜೈಪುರ: ಅಸ್ಪೃಶ್ಯತೆಯನ್ನು ನಾವು ಸಂಪೂರ್ಣವಾಗಿ ತೊಡೆದು ಹಾಕಬೇಕಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್​ಎಸ್​ಎಸ್​) ಮುಖ್ಯಸ್ಥ ಮೋಹನ್​ ಭಾಗವತ್​​ ತಿಳಿಸಿದ್ದಾರೆ.ರಾಜಸ್ಥಾನದ ಆಳ್ವಾರ್​​ನಲ್ಲಿ ಭಾನುವಾರ ನಡೆದ ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, "ನಾವು ನಮ್ಮ ಧರ್ಮವನ್ನು ಮರೆತು ಸ್ವಾರ್ಥಕ್ಕೊಳಗಾದ ಹಿನ್ನೆಲೆಯಲ್ಲಿ ಅಸ್ಪೃಶ್ಯತೆ ಶುರುವಾಯಿತು. ಮೇಲು-ಕೀಳೆಂಬ ಭಾವವನ್ನು ಸಮಾಜದಿಂದ ಸಂಪೂರ್ಣವಾಗಿ ತೊಲಗಿಸಲೇಬೇಕಿದೆ. ಸಾಮಾಜಿಕ ಸಾಮರಸ್ಯದ ಮೂಲಕ ಈ ಬದಲಾವಣೆ ತರಬೇಕು" ಎಂದು ಕರೆ ಕೊಟ್ಟರು. "ಸಾಮಾಜಿಕ ಸಾಮರಸ್ಯ, ಪರಿಸರ, ಕೌಟುಂಬಿಕ ಮೌಲ್ಯಗಳು, ಸ್ವದೇಶಿ ಮತ್ತು ನಾಗರಿಕ ಕರ್ತವ್ಯ ಎಂಬ 5 ಅಂಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಸ್ವಯಂಸೇವಕರಿಗೆ ಭಾಗವತ್ ತಿಳಿಸಿದರು. ಸ್ವಯಂಸೇವಕರು ಇವುಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಸಮಾಜ ಅವರನ್ನು ಅನುಸರಿಸುತ್ತದೆ" ಎಂದರು.

Category
ಕರಾವಳಿ ತರಂಗಿಣಿ