image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್: ಬುರುಡೆ ದೂರುದಾರ ಅಂದರ್

ಧರ್ಮಸ್ಥಳ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್: ಬುರುಡೆ ದೂರುದಾರ ಅಂದರ್

ಉಜಿರೆ: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿದ್ದೇನೆ ಎಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದೂರು ನೀಡಿ, ಎಸ್‌ಐಟಿ ತಂಡ ಮುಂದೆ 17 ಸ್ಥಳಗಳನ್ನು ತೋರಿಸಿ ಗುಂಡಿ ಅಗೆಸಿದ ಬುರುಡೆ ದೂರುದಾರನ ದೂರು ಸುಳ್ಳೆಂದು ಅನುಮಾನ ಬಂದ ಬೆನ್ನಲ್ಲಿಯೇ ಬಂಧನ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಇದರ ಬೆನ್ನಲ್ಲಿಯೇ ಮುಸುಕುಧಾರಿ ಬುರುಡೆದೂರುದಾರನ ಫೋಟೋ ರಿವೀಲ್ ಆಗಿದೆ.

ಧರ್ಮಸ್ಥಳದ ಕೇಸಿನಲ್ಲಿ ನಾನೊಬ್ಬ ಸಾಕ್ಷಿದಾರ ಎಂದು ಸಾಕ್ಷಿ ಸಂರಕ್ಷಣಾ ಕಾಯ್ದೆಯಡಿ ಪೊಲೀಸರಿಂದ ರಕ್ಷಣೆ ಪಡೆದುಕೊಂಡಿದ್ದ ಬುರುಡೆದೂರುದಾರನನ್ನು ಪೊಲೀಸರು ಬಂಧನ ಮಾಡದೇ, ವಶಕ್ಕೂ ಪಡೆಯದೇ ಆತನನ್ನು ಸ್ವತಂತ್ರವಾಗಿ ಬಿಟ್ಟಿದ್ದರು. ಆದರೆ, ಆತನಿಗೆ ನೀಡಲಾಗಿದ್ದ ಸಾಕ್ಷಿ ಸಂರಕ್ಷಣಾ ಕಾಯ್ದೆಯನ್ನು ರದ್ದುಗೊಳಿಸಿದ ಬೆನ್ನಲ್ಲಿಯೇ ಮುಸುಕುದಾರಿ ದೂರುದಾರನನ್ನು ಬಂಧನ ಮಾಡಲಾಗಿದೆ. ಇದಾದ ನಂತರ ಆತನ ಹೆಸರು ಸಿ.ಎನ್. ಚಿನ್ನಯ್ಯ ಅಲಿಯಾಸ್ ಚೆನ್ನ ಎಂದೂ ಆತನ ಮೂಲವನ್ನು ರಿವೀಲ್ ಮಾಡಿತ್ತು. ಇದೀಗ ಚಿನ್ನಯ್ಯನ ಫೋಟೋವನ್ನು ಕೆಲವು ಮಾದ್ಯಮಗಳು ರಿವೀಲ್ ಮಾಡಿದೆ.

Category
ಕರಾವಳಿ ತರಂಗಿಣಿ