image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ವಿವಾದಕ್ಕಡೆಮಾಡಿದ ದೆಹಲಿಯ ಮುಖ್ಯಮಂತ್ರಿಯಾಗಿ ಆತಿಶಿ ಆಯ್ಕೆ

ವಿವಾದಕ್ಕಡೆಮಾಡಿದ ದೆಹಲಿಯ ಮುಖ್ಯಮಂತ್ರಿಯಾಗಿ ಆತಿಶಿ ಆಯ್ಕೆ

ನವದೆಹಲಿ: ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕಿ ಆತಿಶಿ ಆಯ್ಕೆಯಾಗಿದ್ದಾರೆ. ಅರವಿಂದ್​ ಕೇಜ್ರಿವಾಲ್​ ಉತ್ತರಾಧಿಕಾರಿಯಾಗಿ ಆತಿಶಿ ಅವರನ್ನು ಇಂದು ನಡೆದ ಪಕ್ಷದ ಶಾಸಕಾಂಗ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ದೆಹಲಿ ಸರ್ಕಾರದ ಏಕೈಕ ಮಹಿಳಾ ಸಚಿವೆಯಾಗಿರುವ ಆತಿಶಿ, ಕೇಜ್ರಿವಾಲ್ ಅವರ ಆಪ್ತ ಮತ್ತು ನಂಬಿಕಸ್ಥ ಬಳಗದಲ್ಲಿ ಗುರುತಿಸಿಕೊಂಡವರು. ಶಿಕ್ಷಣ, ಇಂಧನ, ಪಿಡಬ್ಲೂಡಿ ಸೇರಿದಂತೆ ಹಲವು ಪ್ರಬಲ ಖಾತೆಗಳನ್ನು ಇವರು ಹೊಂದಿದ್ದಾರೆ.

ಮೂಲಗಳ ಪ್ರಕಾರ, ಸೋಮವಾರ ರಾತ್ರಿ ಕೇಜ್ರಿವಾಲ್​ ನಿವಾಸದಲ್ಲಿ ನಡೆದ ಎಎಪಿಯ ರಾಜಕೀಯ ವ್ಯವಹಾರ ಸಮಿತಿ (ಪ್ಯಾಕ್​) ಸಭೆಯಲ್ಲಿ ಆತಿಶಿ ಹೆಸರು ಪ್ರಸ್ತಾಪಿಸಲಾಗಿದ್ದು, ಪಕ್ಷದ ಸದಸ್ಯರು ಸಹಮತ ಸೂಚಿಸಿದ್ದರು. ಆದರೆ ಆತಿಶಿ ಪೋಷಕರು ಆಫ್ಜಲ್ ಗುರು ಪರವಾಗಿದ್ದರು ಎಂಬ ವಿಷಯ ವಿವಾದಕ್ಕೆ ಎಡೆಮಾಡಿದೆ.

Category
ಕರಾವಳಿ ತರಂಗಿಣಿ