ಮಂಗಳೂರು ಮಹಾನಗರ ಪಾಲಿಕೆಯ ಮುಂದಿನ ಅವಧಿಗೆ ಮೇಯರ್ ಅಭ್ಯರ್ಥಿತನಕ್ಕೆ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 17 ಮನಪಾ ಸದಸ್ಯರಾಗಿರುವ ಶ್ರೀ ಮನೋಜ್
ಹಾಗೂ ಉಪಮೇಯರ್ ಅಭ್ಯರ್ಥಿತನಕ್ಕೆ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 58ರ ಮನಪಾ ಸದಸ್ಯರಾಗಿರುವ ಶ್ರೀಮತಿ ಭಾನುಮತಿ ಪಿ.ಎಸ್. ಅವರನ್ನು ಭಾರತೀಯ ಜನತಾ ಪಾರ್ಟಿಯ ಕಡೆಯಿಂದ ಆಯ್ಕೆಮಾಡಲಾಗಿದೆ.
ಈ ಆಯ್ಕೆ ಪ್ರಕ್ರಿಯೆಯು ದ.ಕ. ಜಿಲ್ಲಾ ಕಛೇರಿಯಲ್ಲಿ ಸಭೆಯಲ್ಲಿ ನಡೆಯಿತು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.