ಮಂಗಳೂರು-ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 14 ರಿಂದ ಸೆಪ್ಟೆಂಬರ್ 16 ರವರೆಗೆ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಸಾರ್ವಜನಿಕ ಮೊಸರುಕುಡಿಕೆ, ಮೆರವಣಿಗೆ ಮತ್ತು ಕಾರ್ಯಕ್ರಮಗಳು ನಡೆಯಲಿದೆ ಈ ಸಮಯದಲ್ಲಿ ಕಿಡಿಗೇಡಿಗಳು ಅಮಲು ಪದಾರ್ಥ ಸೇವಿಸಿ ಶಾಂತಿ ಭಂಗವನ್ನುಂಟು ಮಾಡಿ ಕಾನೂನು ಸುವ್ಯವಸ್ಥೆಗೆ ದಕ್ಕೆ ತರುವಂತಹ ಸಂಭವನೀಯತೆ ಗಳಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಅಗತ್ಯವಿರುವುದರಿಂದ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಗದಿತ ಕಾರ್ಯಕ್ರಮ ನಡೆಯುವ ದಿನಾಂಕಗಳಂದು ನಮೂದಿಸಿರುವ ಬಾರ್, ವೈನ್ ಶಾಪ್‍ಗಳಲ್ಲಿ ಮತ್ತು ಮದ್ಯದಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯ ಮಾರಾಟ ಮಾಡದಂತೆ ಎಲ್ಲಾ ರೀತಿಯ ಮದ್ಯದಂಗಡಿಗಳನ್ನು ಬಂದ್ ಮಾಡಲು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಆದೇಶ ಹೊರಡಿಸಿದ್ದಾರೆ