ಬೆಂಗಳೂರು: ರಾಜ್ಯದ ದೇವಾಲಯಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆ ಮಾಡುವಂತೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ತಿರುಪತಿ ಲಡ್ಡು ತಯಾರಿಕೆಯಲ್ಲಿ ಕಲಬೆರಕೆ ತುಪ್ಪ ಬಳಸಿರುವ ಆರೋಪ ಕೇಳಿ ಬಂದಿದ್ದು, ಇದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಈಗ ಕರ್ನಾಟಕ ಸರಕಾರ ದೇವಸ್ಥಾನದ ಸೇವೆಗಳಿಗೆ, ದೀಪಗಳಿಗೆ, ಪ್ರಸಾದ ತಯಾರಿಕೆಗೆ, ದಾಸೋಹ ಭವನಗಳಲ್ಲಿ ಇನ್ನು ಮುಂದೆ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಬಳಕೆ ಮಾಡಬೇಕು ಎಂದು ಸೂಚನೆ ನೀಡಲಾಗಿದ್ದು, ಈ ಬಗ್ಗೆ ಧಾರ್ಮಿಕ ದತ್ತಿ ಇಲಾಖೆ ದೇವಾಲಯಗಳಿಗೆ ಸುತ್ತೋಲೆ ಹೊರಡಿಸಿದೆ.