ಚೆನ್ನೈ: ನಟ ಹಾಗೂ ತಮಿಳು ವೆಟ್ರಿ ಕಾಳಗಂ ಪಕ್ಷದ ನಾಯಕ ಆಯೋಜಿಸಿದ ಪಕ್ಷದ ರ್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತದಿಂದ ಮೃತಪಟ್ಟವರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ. ಜೊತೆಗೆ 40ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು, ಮೃತಪಟ್ಟವರ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.