image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ದಕ್ಷಿಣ ಕನ್ನಡ ಆನೆ ಕಾರ್ಯಪಡೆಗೆ 48 ಸಿಬ್ಬಂದಿ -ಈಶ್ವರ ಖಂಡ್ರೆ

ದಕ್ಷಿಣ ಕನ್ನಡ ಆನೆ ಕಾರ್ಯಪಡೆಗೆ 48 ಸಿಬ್ಬಂದಿ -ಈಶ್ವರ ಖಂಡ್ರೆ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಕಾಡಾನೆ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಆನೆಗಳನ್ನು ಮರಳಿ ಕಾಡಿಗಟ್ಟಲು ಪ್ರತ್ಯೇಕ ಆನೆ ಕಾರ್ಯಪಡೆ ರಚಿಸಲು ಆದೇಶಿದ್ದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ, ಈ ಪಡೆಗೆ 48 ಸಿಬ್ಬಂದಿ ನಿಯೋಜನೆಗೆ ಅನುಮೋದನೆ ನೀಡಿದ್ದಾರೆ.

ಈ ಕಾರ್ಯಪಡೆಯ ನೇತೃತ್ವವನ್ನು ಮಂಗಳೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ವಹಿಸಲಿದ್ದು, ಪಡೆಯಲ್ಲಿ ಒಬ್ಬರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಒಬ್ಬರು ಪಶುವೈದ್ಯಾಧಿಕಾರಿ, ಒಬ್ಬರು ವಲಯ ಅರಣ್ಯಾಧಿಕಾರಿ, ನಾಲ್ವರು ಉಪ ವಲಯ ಅರಣ್ಯಾಧಿಕಾರಿ ಹಾಗೂ 8 ಅರಣ್ಯ ರಕ್ಷಕರು ಹಾಗೂ 32 ಹೊರಗುತ್ತಿಗೆಯ ಮುಂಚೂಣಿ ಸಿಬ್ಬಂದಿ ಇರಲಿದ್ದಾರೆ.

ಈ ಆನೆ ಕಾರ್ಯಪಡೆಯು ಕಾಡಾನೆಗಳು ಓಡಾಡುವ ವಸತಿ ಪ್ರದೇಶ, ರೈತರ ತೋಟ, ಜಮೀನಿನ ಬಳಿ ಗಸ್ತು ತಿರುಗಲಿದ್ದು, ಆನೆಗಳು ಕಂಡು ಬಂದಲ್ಲಿ ಕಾಡಿಗೆ ಮರಳಿಸುವ ಕಾರ್ಯವನ್ನು ತ್ವರಿತವಾಗಿ ಕೈಗೊಳ್ಳಲಿದೆ ಮತ್ತು ಆನೆಗಳ ಚಲನವಲನದ ಬಗ್ಗೆ ಕಂಟ್ರೋಲ್ ರೂಂಗೆ ಮಾಹಿತಿ ನೀಡಿ ಆ ಮೂಲಕ ಸಾರ್ವಜನಿಕರಿಗೆ ಮುನ್ನಚ್ಚರಿಕೆ ಸಂದೇಶ ರವಾನಿಸಲು ನೆರವಾಗಲಿದೆ. ಇದರಿಂದ ರೈತರಿಗೆ ಉಂಟಾಗುತ್ತಿದ್ದ ಬೆಳೆ ಹಾನಿ ತಪ್ಪಿಸಲು ಮತ್ತು ಅಮೂಲ್ಯ ಜೀವ ಉಳಿಸಲು ಸಹಕಾರಿ ಆಗಲಿದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ