image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಕನ್ನಡ ಹೋರಾಟಗಾರರ ಮೇಲಿನ ಕೇಸುಗಳನ್ನು ವಾಪಾಸ್ ತಗೊತೀವಿ: ಸಿ.ಎಂ.ಸಿದ್ದರಾಮಯ್ಯ ಘೋಷಣೆ

ಕನ್ನಡ ಹೋರಾಟಗಾರರ ಮೇಲಿನ ಕೇಸುಗಳನ್ನು ವಾಪಾಸ್ ತಗೊತೀವಿ: ಸಿ.ಎಂ.ಸಿದ್ದರಾಮಯ್ಯ ಘೋಷಣೆ

ಬೆಂಗಳೂರು:ಕನ್ನಡ ಹೋರಾಟಗಾರರ ಮೇಲಿನ ಕೇಸುಗಳನ್ನು ವಾಪಾಸ್ ತಗೊತೀವಿ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಭರವಸೆ ನೀಡಿದ್ದಾರೆ.ಮೈಸೂರು ಬ್ಯಾಂಕ್ ವೃತ್ತದ ನೃಪತುಂಗ ಮಂಟಪದಲ್ಲಿ ಭುವನೇಶ್ವರಿ ಹಾಗೂ ಅಣ್ಣಮ್ಮ ದೇವತೆಯ ವೈಭವದ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ಅವರು,ನಾವೆಲ್ಲರೂ ಕನ್ನಡ ನೆಲ, ಜಲ, ಭಾಷೆ, ಸಂಸ್ಕೃತಿ ಬಗ್ಗೆ ಅಭಿಮಾನ, ಪ್ರೀತಿ ಬೆಳೆಸಿಕೊಳ್ಳಬೇಕು. ನಮ್ಮ ನೆಲದಲ್ಲಿ ಕನ್ನಡದ ವಾತಾವರಣ ಬೆಳೆಸಬೇಕು‌. ಇದಕ್ಕಾಗಿ ಯಾರು ಯಾವುದೇ ಭಾಷೆಯಲ್ಲಿ ಮಾತನಾಡಿದರೂ ನೀವು ಕನ್ನಡದಲ್ಲೇ ಉತ್ತರ ಕೊಡಬೇಕು ಎಂದು ಕರೆ ನೀಡಿದರು.

ವಾಟಾಳ್ ಕನ್ನಡದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದ ಹೋರಾಟಗಾರರು. ದೇವರಾಜ ಅರಸು ಅವರು ಮಂತ್ರಿ ಸ್ಥಾನ ಕೊಡ್ತೀನಿ ಎಂದು ಕರೆದರೂ ಕನ್ನಡ ಪಕ್ಷ ಮತ್ತು ಕನ್ನಡ ಹೋರಾಟ ಬಿಡಲು ವಾಟಾಳ್ ಅವರು ಒಪ್ಪಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ವುಗೆ ವ್ಯಕ್ತಪಡಿಸಿದರು.ಕನ್ನಡ ನೆಲದಲ್ಲಿ ಬದುಕು ಕಟ್ಟಿಕೊಂಡ  ಪ್ರತಿಯೊಬ್ಬರೂ ಕನ್ನಡದ ವಾತಾವರಣವನ್ನು ಗೌರವಿಸುತ್ತಾರೆ.

ಕನ್ನಡ ನೆಲದಲ್ಲಿ ನಾವು ಕನ್ನಡದಲ್ಲೇ ಮಾತಾಡುತ್ತೇವೆ ಎನ್ನುವ ಶಪಥ ಮಾಡೋಣ ಎಂದು ಕರೆ ನೀಡಿದರು. ನಮ್ಮ ಭೂಮಿ, ನಮ್ಮ ನೆಲ, ನಮ್ಮ ಜಲ, ನಮ್ಮ ಭಾಷೆ ಎನ್ನುವ ಅಭಿಮಾನ ಮೂಡಲಿ ಎಂದು ಕರೆ ನೀಡಿದರು. ಮೈಸೂರು ವಿವಿಯಲ್ಲಿ ನನಗೆ ಹಿಂದೆಯೇ ಡಾಕ್ಟರೇಟ್ ಕೊಡ್ತೀವಿ ಎಂದಿದ್ದರು. ಆದರೆ ನಾನು ಪಡೆಯಲಿಲ್ಲ. ಬೇಡ ಅಂದೆ. ಓದಿ, ಜ್ಞಾನ ವಿಸ್ತಾರ ಮಾಡಿಕೊಂಡು ಡಾಕ್ಟರೇಟ್ ಪಡೆಯಬೇಕು ಎನ್ನುವುದು ನನ್ನ ವೈಯುಕ್ತಿಕ ಭಾವನೆ ಎಂದರು.ನಾನು ವೈಯುಕ್ತಿಕವಾಗಿ ದ್ವಿಭಾಷಾ ಪರವಾಗಿ ಇದ್ದೇನೆ. ಆದರೆ ದ್ವಿಭಾಷಾ ನೀತಿಯಾಗಿ ಕಾನೂನು ಜಾರಿ ಆಗಬೇಕಾದರೆ ಕ್ಯಾಬಿನೆಟ್ ನಲ್ಲಿ ಚರ್ಚಿಸಬೇಕಾಗುತ್ತದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

MES ನವರೂ ಕನ್ನಡಿಗರೇ. ಅವರಲ್ಲಿ ಯಾರಾದರೂ ಪುಂಡಾಟಿಕೆ ಮಾಡಿದರೆ ಅದನ್ನು ಮಟ್ಟಹಾಕ್ತೀವಿ. ಗಡಿ ಭಾಗದ ಕನ್ನಡ ಶಾಲೆಗಳ ಅಭಿವೃದ್ಧಿಗೆ ಅಗತ್ಯ ಇರುವುದನ್ನೆಲ್ಲಾ ಮಾಡಲು ಸರ್ಕಾರ ಸಿದ್ದವಿದೆ ಎಂದರು.

Category
ಕರಾವಳಿ ತರಂಗಿಣಿ