ನವದೆಹಲಿ: ಅಲ್ಪಸಂಖ್ಯಾತರು ಧಾರ್ಮಿಕ ಸಂಸ್ಥೆಗಳನ್ನು ನಡೆಸಬಹುದು ಅಂತಾದರೆ ಹಿಂದೂಗಳೇಕೆ ನಡೆಸಬಾರದು? ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸಬೇಕು. ಈ ಬಗ್ಗೆ ಶೀಘ್ರದಲ್ಲೇ ದೇಶವ್ಯಾಪಿ ಆಂದೋಲನ ನಡೆಸುತ್ತೇವೆ’ ಎಂದು ತಿರುಮಲ ಲಡ್ಡು ಪ್ರಸಾದದ ವಿವಾದ ಎದ್ದಿರುವ ನಡುವೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಎಚ್‌ಪಿ ಜಂಟಿ ಕಾರ್ಯದರ್ಶಿ ಸುರೇಂದ್ರ ಜೈನ್, ‘ದೇಶಾದ್ಯಂತ ದೇವಾಲಯಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸುವುದು ನಮ್ಮ ಸಂಕಲ್ಪ. ಪ್ರತಿ ರಾಜ್ಯಗಳಲ್ಲಿಯೂ ಆಂದೋಲನ ನಡೆಸಿ ಮುಖ್ಯಮಂತ್ರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ನೀಡುತ್ತೇವೆ. ಅಗತ್ಯವಿದ್ದಲ್ಲಿ ಕಾನೂನಿನ ಮೊರೆ ಹೋಗಲಾಗುವುದು. ದೇಗುಲಗಳನ್ನು ಸರ್ಕಾರ ನಿಯಂತ್ರಿಸುವುದು ಸಂವಿಧಾನದ ಉಲ್ಲಂಘನೆ’ ಇಂಥ ವಿವಾದ ಶಬರಿಮಲೆ ಪ್ರಸಾದದ ಬಗ್ಗೆಯೂ ಎದ್ದಿತ್ತು ಎಂದರು.