image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಭಗವಾದ್ವಜ ವಿಶ್ವದಲ್ಲಿ ಧರ್ಮ ಮತ್ತು ಕರ್ಮವನ್ನು ಪ್ರತಿನಿಧಿಸುತ್ತದೆ : ಪ್ರಧಾನಿ ಮೋದಿ

ಭಗವಾದ್ವಜ ವಿಶ್ವದಲ್ಲಿ ಧರ್ಮ ಮತ್ತು ಕರ್ಮವನ್ನು ಪ್ರತಿನಿಧಿಸುತ್ತದೆ : ಪ್ರಧಾನಿ ಮೋದಿ

ಅಯೋಧ್ಯೆ : ಶುಭ ಮುಹೂರ್ತದಲ್ಲಿ ಅಯೋಧ್ಯೆಯ ರಾಮಮಂದಿರದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆದಿದೆ. 191 ಅಡಿ ಎತ್ತರದ ರಾಮ ಮಂದಿರದ ಮೇಲ್ಭಾಗದಲ್ಲಿ 11 ಅಡಿ ಅಗಲ ಮತ್ತು 22 ಅಡಿ ಉದ್ದದ ತ್ರಿಕೋನಾಕಾರದ ಕೇಸರಿ ಧ್ವಜವನ್ನು ಹಾರಿಸಲಾಗಿದ್ದು, ದ್ವಜದ ಮೇಲೆ ಸೂರ್ಯವಂಶಿ ಮತ್ತು ತ್ರೇತಾಯುಗದ ಚಿಹ್ನೆಗಳನ್ನು ಇರಿಸಲಾಗಿದೆ. ರಾಮ ಮಂದಿರದ ಮೇಲೆ ಹಾರಲಿರುವ ಧ್ವಜ ತುಂಬಾ ವಿಶೇಷವಾಗಿದ್ದು, ದೈವಿಕ ಧ್ವಜವನ್ನು ಗುಜರಾತ್‌ನ ಅಹಮದಾಬಾದ್‌ನಲ್ಲಿ ತಯಾರಿಸಲಾಗಿದೆ. ಅಯೋಧ್ಯೆ ರಾಮ ಮಂದಿರದ ಧಾರ್ಮಿಕ ಧ್ವಜದಲ್ಲಿರುವ ಚಿಹ್ನೆಗಳಿಗೆ ಪ್ರತಿಯೊಂದಕ್ಕೂ ವಿಶೇಷ ಅರ್ಥವಿದೆ. ಕೇಸರಿ ಬಣ್ಣದ ಧ್ವಜ, ಸೂರ್ಯ ದೇವರು ಮತ್ತು ಓಂ ಚಿಹ್ನೆ ಹೊಂದಿದೆ. ಧಾರ್ಮಿಕ ಮಹತ್ವವುಳ್ಳ ವಿಶಿಷ್ಟವಾದ ಮರದ ಚಿತ್ರವನ್ನು ಸಹ ಧ್ವಜದ ಮೇಲೆ ಚಿತ್ರಿಸಲಾಗಿದೆ. ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಭಾರತದ ವಿವಿಧೆಡೆಯ ಆರು ಸಾವಿರ ಪ್ರಮುಖ ಗಣ್ಯರು ಭಾಗವಹಿಸಿದ್ದಾರೆ. ಈ ಸಂಧರ್ಭ ಮಾತನಾಡಿದ ಪ್ರಧಾನಿ ಮೋದಿ ವಿಶ್ವದಲ್ಲಿ ಧರ್ಮ ಮತ್ತು ಕರ್ಮವನ್ನು ಪ್ರತಿನಿಧಿಸುತ್ತದೆ ಭಗವಾಧ್ವಜ ಎಂದು ಜಗತ್ತನ್ನು ಉದ್ದೇಶಿಸಿ ಸಂದೇಶ ನೀಡಿದರು.

Category
ಕರಾವಳಿ ತರಂಗಿಣಿ