image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಸಿದ್ದರಾಮಯ್ಯ ರಾಜೀನಾಮೆ ಕೊಡವುದು ಉತ್ತಮ: ನ್ಯಾ. ಸಂತೋಷ್ ಹೆಗ್ಡೆ

ಸಿದ್ದರಾಮಯ್ಯ ರಾಜೀನಾಮೆ ಕೊಡವುದು ಉತ್ತಮ: ನ್ಯಾ. ಸಂತೋಷ್ ಹೆಗ್ಡೆ

ಮಂಗಳೂರು: ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವುದು ಅಥವಾ ಕೊಡಬಾರದೆಂಬುದು ಅವರಿಗೆ ಬಿಟ್ಟದ್ದು. ಕೊಡದಿದ್ದರೆ ಕಾನೂನಿನಲ್ಲಿ ತಪ್ಪಿಲ್ಲ. ಆದರೆ, ಸಾರ್ವಜನಿಕರ ದೃಷ್ಟಿಯಲ್ಲಿ ನೋಡಿದರೆ ರಾಜೀನಾಮೆ ಕೊಡಬೇಕೆಂದು ನನಗೆ ಅನ್ನಿಸುತ್ತದೆ ಎಂದು ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ ಹೇಳಿದ್ದಾರೆ.

ಮಂಗಳೂರಿನಲ್ಲಿ ಮಾದ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ತನಿಖೆಗೆ ಅನುಮೋದನೆ ಕೊಟ್ಟದ್ದು ಮೂಡಾ ವಿಚಾರದಲ್ಲಿ ಮಾತ್ರ. ಆದರೆ, ಈ ವಿಚಾರದಲ್ಲಿ ಹೈಕೋರ್ಟ್ ಮೇಲ್ನೋಟಕ್ಕೆ ಪುರಾವೆಯಿದೆ ಎಂದು ಹೇಳಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ‌ಕೊಡಬೇಕು ಎಂದು ನನಗೆ ಅನ್ನಿಸುತ್ತದೆ ಎಂದರು.

ಯಾವ ಸಂಸ್ಥೆಯಿಂದ ತನಿಖೆ ನಡೆದರೆ ಉತ್ತಮವೆಂದು ನಾನು ಹೇಳುವುದಿಲ್ಲ, ಅದು ಸರ್ಕಾರಕ್ಕೆ ಬಿಟ್ಟದ್ದು. ಸಿಬಿಐ ಅಥವಾ ಲೋಕಾಯುಕ್ತವೆಂದು ನಾನು ಹೇಳಲು ಹೋಗುವುದಿಲ್ಲ. ಯಾರಿಗೆ ಕೊಟ್ಟರೂ ಪ್ರಾಮಾಣಿಕ ತನಿಖೆ ಮಾಡಬಹುದು. ಸಿದ್ದರಾಮಯ್ಯ ಅವರು ಆರೋಪಿತನಲ್ಲವೆಂದು ತೀರ್ಪು ಬಂದಲ್ಲಿ ಮತ್ತೆ ಸಿಎಂ ಆಗಬಹುದು ಸಂತೋಷ್ ಹೆಗ್ಡೆ ಹೇಳಿದರು.

ಮುಡಾ ಹಗರಣ ಸಂಬಂಧ ತಮ್ಮ ವಿರುದ್ಧ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರು ಆದೇಶಿಸಿದ್ದನ್ನು ಪ್ರಶ್ನಿಸಿದ್ದ ಸಿಎಂ ಸಿದ್ದರಾಮಯ್ಯಗೆ ಕಾನೂನು ಹೋರಾಟದಲ್ಲಿ ಆರಂಭಿಕ ಹಿನ್ನಡೆಯಾಗಿದೆ. ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್, ಮಂಗಳವಾರ ಅರ್ಜಿ ವಜಾಗೊಳಿಸಿತ್ತು. ಇದರ ಮಧ್ಯೆ ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶ ನೀಡಿದೆ. ಈ ಆದೇಶದ ಬೆನ್ನಲ್ಲೇ ಪ್ರತಿಪಕ್ಷ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಒತ್ತಾಯಿಸುತ್ತಿವೆ.

Category
ಕರಾವಳಿ ತರಂಗಿಣಿ