image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಸ್ಥಳಿಯಾಡಳಿತ ಸರಕಾರದ ಕೈಗೊಂಬೆಯಂತೆ ವರ್ತಿಸುತ್ತಿದೆ- ಶಾಸಕ ವೇದವ್ಯಾಸ ಕಾಮತ್ ಆರೋಪ

ಸ್ಥಳಿಯಾಡಳಿತ ಸರಕಾರದ ಕೈಗೊಂಬೆಯಂತೆ ವರ್ತಿಸುತ್ತಿದೆ- ಶಾಸಕ ವೇದವ್ಯಾಸ ಕಾಮತ್ ಆರೋಪ

ಮಂಗಳೂರು: ಸ್ಥಳಿಯಾಡಳಿತ ಸರಕಾರದ ಕೈಗೊಂಬೆಯಂತೆ ವರ್ತಿಸುತ್ತಿದೆ ಎಂದು- ಶಾಸಕ ವೇದವ್ಯಾಸ ಕಾಮತ್ ಗಂಭೀರ ಆರೋಪ ಮಾಡಿದ್ದಾರೆ. ಅವರು ನಗರದ ಅಟಲ್ ಕೇಂದ್ರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಡತನಾಡಿ, ಮಹಾನಗರ ಪಾಲಿಕೆಯ ವ್ಯಾಪ್ತಿಯ ಕದ್ರಿಪಾರ್ಕ್, ಲೇಡಿಹಿಲ್, ಸೇರಿದಂತೆ ಬಹುತೇಕ ಭಾಗದಲ್ಲಿ ಪಾಲಿಕೆಯ ಅಧಿಕಾರಿಗಳು ಗೂಡಂಗಡಿಗಳನ್ನು ತೆರವುಗೊಳಿಸಿದ್ದು ಕಾಂಗ್ರೆಸ್ ನಾಯಕರು ಸೂಚಿಸಿರುವ ಕಡೆಗಳಲ್ಲಿ ಮಾತ್ರ ನಿರ್ಧಾಕ್ಷಿಣ್ಯ ಕ್ರಮಕೈಗೊಂಡು ಕೆಲವರಿಗೆ ಮಾತ್ರ ಅನ್ಯಾಯ ಮಾಡುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು. 

ತೆರವುಗೊಳಿಸಲೇಬೇಕಾದ ಅನಿವಾರ್ಯತೆಯಿದ್ದರೆ ಎಲ್ಲವನ್ನೂ ತೆರವುಗೊಳಿಸಬೇಕು. ಅದು ಬಿಟ್ಟು ದುಡಿದು ತಿನ್ನುವ ಬಡ ವ್ಯಾಪಾರಿಗಳ ಮಧ್ಯೆಯೂ ಯಾಕೆ ಇಂತಹ ತಾರತಮ್ಯ? ಪಾಲಿಕೆಯಲ್ಲಿ ಬಿಜೆಪಿ ಆಡಳಿತವಿದ್ದಾಗ ಇಂತಹ ಅನ್ಯಾಯಗಳಿಗೆ ಆಸ್ಪದವಿರಲಿಲ್ಲ. ಇದೀಗ ರಾಜ್ಯ ಕಾಂಗ್ರೆಸ್ ಸರ್ಕಾರದ ಮೂಲಕ ಆಡಳಿತ ನಡೆಯುತ್ತಿರುವ ಈ ಸಂದರ್ಭದಲ್ಲಿ ಇಂತಹ ಪರಿಸ್ಥಿತಿಯನ್ನು ನೋಡುವಂತಾಗಿದೆ. ಜೈಲ್ ಜಾಮರ್, ಇ- ಖಾತಾ ಸಮಸ್ಯೆಗಳು ಮಿತಿ ಮೀರಿದ್ದು ಸಚಿವರು, ಜಿಲ್ಲಾಡಳಿತ, ಸರ್ಕಾರ ಸೇರಿದಂತೆ ಎಲ್ಲಾ ಪ್ರಯತ್ನದ ಹೊರತಾಗಿಯೂ ದಪ್ಪ ಚರ್ಮದ ರಾಜ್ಯ ಸರ್ಕಾರ ಜನರ ಬವಣೆಗೆ ಅಂತ್ಯ ಹಾಡದಿರುವುದು ದುರಂತ ಎಂದರು.

ಪಾಲಿಕೆಯ ಫ್ಲೆಕ್ಸ್ ನಿಯಮಗಳು ಕೇವಲ ದೇವಸ್ಥಾನ, ದೈವಸ್ಥಾನ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳಿಗೆ ಮಾತ್ರ ಅನ್ವಯವಾಗುತ್ತಿದ್ದು ಕಾಂಗ್ರೆಸ್ಸಿನ ಯಾವುದೇ ಕಾರ್ಯಕ್ರಮಗಳಿಗೆ ಅನ್ವಯವಾಗುತ್ತಿಲ್ಲ. ಕಾಂಗ್ರೆಸ್ಸಿಗರು ದೇವರಿಗಿಂತ ದೊಡ್ಡವರಾ? ಪಾಲಿಕೆಯವರು ಆಳುವ ಪಕ್ಷದ ಕೈಗೊಂಬೆಯಂತೆ ವರ್ತಿಸುವುದು ಬಿಟ್ಟು, ನಗರದ ಬೀದಿಗಳಲ್ಲಿ ಬಿದ್ದಿರುವ ಕಸದ ರಾಶಿ ಸಹಿತ ಕಟ್ಟಡ ಸಾಮಾಗ್ರಿಗಳ ಅವಶೇಷಗಳನ್ನು ತೆರವುಗೊಳಿಸಲಿ. ಅನೇಕ ವಾರ್ಡ್ ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಹೊಂಡಗಳಿಂದ ಕೂಡಿದ ರಸ್ತೆಗಳು ನಿರ್ಮಾಣವಾಗಿವೆ. ಜನರ ವಿರೋಧದ ಮಧ್ಯೆಯೂ ಕದ್ರಿ ಪಾರ್ಕ್ ನಲ್ಲಿ ಪಾರ್ಕಿಂಗ್ ಶುಲ್ಕ ಆರಂಭಿಸಲಾಗಿದೆ. ಮೊದಲು ಇದನ್ನು ಸರಿಪಡಿಸುವ ಬಗ್ಗೆ ಗಮನ ಹರಿಸಲಿ ಎಂದರು. 

ಪತ್ರಿಕಾಗೋಷ್ಟಿಯಲ್ಲಿ ಮಂಡಲದ ಬಿಜೆಪಿ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ಹೆಗ್ಡೆ, ಲಲ್ಲೇಶ್ ಕುಮಾರ್, ಪ್ರಮುಖರಾದ ಭಾಸ್ಕರ ಚಂದ್ರ ಶೆಟ್ಟಿ, ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ