ಬೆಂಗಳೂರು: ಚುನಾವಣಾ ಬಾಂಡ್‌ಗಳ ಮೂಲಕ ಕೋಟ್ಯಾಂತರ ರೂಪಾಯಿ ಅವ್ಯವಹಾರ ಅಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಸೇರಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಬಿಜೆಪಿ ಮುಖಂಡ ನಳಿನ್ ಕುಮಾರ್ ಕಟೀಲ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
2019 ಏಪ್ರಿಲ್ ತಿಂಗಳಿನಿಂದ 2022ರ ಆಗಸ್ಟ್ ತಿಂಗಳವರೆಗೆ ಉದ್ಯಮಿ ಅನಿಲ್ ಅಗಲ್‌ವಾಲ್ ಅವರ ಸಂಸ್ಥೆಯ ಕಡೆಯಿಂದ ಸುಮಾರು 230 ಕೋಟಿ ರೂ. ಮತ್ತು ಅರೊಬಿಂದೋ ಫಾರ್ಮಸಿ ಸಂಸ್ಥೆಯಿಂದ 49 ಕೋಟಿ ರು.ನಷ್ಟು ಚುನಾವಣಾ ಬಾಂಡ್ ಗಳ ಮೂಲಕ ವಸೂಲು ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.