image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ನನ್ನಂತೆಯೇ ಯತೀಂದ್ರನನ್ನೂ ಬೆಳೆಸಿ, ಹರಸಿ: ಸಿಎಂ ಸಿದ್ದರಾಮಯ್ಯ ಭಾವುಕ ಮನವಿ

ನನ್ನಂತೆಯೇ ಯತೀಂದ್ರನನ್ನೂ ಬೆಳೆಸಿ, ಹರಸಿ: ಸಿಎಂ ಸಿದ್ದರಾಮಯ್ಯ ಭಾವುಕ ಮನವಿ

ಮೈಸೂರು: "ರಾಜಕೀಯವಾಗಿ ನನ್ನನ್ನು ಹೇಗೆ ಬೆಳೆಸಿದ್ದೀರೋ, ಅದೇ ರೀತಿ ಮಗ ಯತೀಂದ್ರನನ್ನೂ ಬೆಳೆಸಿ ಮತ್ತು ಹರಸಿ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ಷೇತ್ರದ ಜನರಲ್ಲಿ ಭಾವುಕ ಮನವಿ ಮಾಡಿಕೊಂಡಿದ್ದಾರೆ.

ತಮ್ಮ ತವರು ಜಿಲ್ಲೆಯ ವರಕೂಡು ಗ್ರಾಮದಲ್ಲಿ ನೆಲೆಸಿರುವ ಶ್ರೀ ಬೀರೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, "ನಾನು ರಾಜಕೀಯದಲ್ಲಿ ಸೋಲು ಮತ್ತು ಗೆಲುವು ಎರಡನ್ನೂ ಕಂಡವನು. ಸೋತಾಗಲೂ ಜನರ ಸೇವೆ ಮಾಡುವುದನ್ನು ಬಿಟ್ಟಿಲ್ಲ. ನನ್ನ ಕೊನೆಯ ಉಸಿರಿರುವವರೆಗೂ ರಾಜಕೀಯದಲ್ಲಿಯೇ ಇದ್ದು ನಿಮ್ಮ ಸೇವೆ ಮಾಡುತ್ತೇನೆ" ಎಂದು ಸ್ಪಷ್ಟಪಡಿಸಿದರು.
ಆಡಳಿತಾತ್ಮಕ ಒತ್ತಡ ಹಾಗೂ ರಾಜ್ಯಾದ್ಯಂತ ಪ್ರವಾಸ ಮಾಡಬೇಕಾದ ಜವಾಬ್ದಾರಿಯಿಂದಾಗಿ ಕ್ಷೇತ್ರಕ್ಕೆ ಹೆಚ್ಚಿನ ಸಮಯ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಒಪ್ಪಿಕೊಂಡ ಮುಖ್ಯಮಂತ್ರಿಗಳು, "ನನ್ನ ಅನುಪಸ್ಥಿತಿಯಲ್ಲಿ ಮಗ ಯತೀಂದ್ರ ಇಲ್ಲಿಗೆ ಬರುತ್ತಾನೆ. ಅವನನ್ನೂ ನಿಮ್ಮ ಮಗನಂತೆ ಕಂಡು ಪ್ರೋತ್ಸಾಹಿಸಿ" ಎಂದು ಮನವಿ ಮಾಡಿದರು.
ಇದಕ್ಕೂ ಮುನ್ನ ಮುಖ್ಯಮಂತ್ರಿಗಳ ಭೇಟಿಯಿಂದ ಹರ್ಷಗೊಂಡ ಗ್ರಾಮಸ್ಥರು ಅವರಿಗೆ ಅದ್ಧೂರಿ ಸ್ವಾಗತ ಕೋರಿದರು. ಜೆಸಿಬಿ ಮೂಲಕ ಬೃಹತ್ ಸೇಬಿನ ಹಾರ ಹಾಕಿ, ಹೂಮಳೆ ಸುರಿಸುವ ಮೂಲಕ ತಮ್ಮ ನೆಚ್ಚಿನ ನಾಯಕನನ್ನು ಬರಮಾಡಿಕೊಂಡರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ