image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಬರೋಬ್ಬರಿ 16,000 ಮೆಟಾ ಉದ್ಯೋಗಿಗಳು ತಮ್ಮ ಕೆಲಸ ಕಳೆದುಕೊಳ್ಳುವ ಭೀತಿ!

ಬರೋಬ್ಬರಿ 16,000 ಮೆಟಾ ಉದ್ಯೋಗಿಗಳು ತಮ್ಮ ಕೆಲಸ ಕಳೆದುಕೊಳ್ಳುವ ಭೀತಿ!

ವಾಷಿಂಗ್ಟನ್ : ಜಾಗತಿಕ ಟೆಕ್ ದೈತ್ಯ ಮೆಟಾ ಸಂಸ್ಥೆಯು ತನ್ನ ಇತಿಹಾಸದಲ್ಲೇ ಅತಿದೊಡ್ಡ ಉದ್ಯೋಗ ಕಡಿತಕ್ಕೆ ಮುಂದಾಗಿದೆ ಎಂಬ ಆಘಾತಕಾರಿ ಸುದ್ದಿ ಹೊರಬಿದ್ದಿದೆ. ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನಕ್ಕೆ ಹೆಚ್ಚಿನ ಒತ್ತು ನೀಡುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ. ಅಮೆರಿಕದ ಮೂಲದ ಮೆಟಾ ಕಂಪನಿಯು ತನ್ನ ಒಟ್ಟು ಉದ್ಯೋಗಿಗಳಲ್ಲಿ ಶೇ. 20ರಷ್ಟು ಮಂದಿಯನ್ನು ಕೆಲಸದಿಂದ ತೆಗೆದುಹಾಕಲು ಮುಂದಾಗಿದೆ. ಅಂದರೆ ಬರೋಬ್ಬರಿ 16,000 ಉದ್ಯೋಗಿಗಳು ತಮ್ಮ ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಆದರೆ, ಈ ಪ್ರಕ್ರಿಯೆ ಯಾವ ದಿನಾಂಕದಿಂದ ಆರಂಭವಾಗಲಿದೆ ಎಂಬ ಬಗ್ಗೆ ಕಂಪನಿಯು ಇನ್ನೂ ಅಧಿಕೃತವಾಗಿ ಸ್ಪಷ್ಟಪಡಿಸಿಲ್ಲ. ಸಿಇಒ ಮಾರ್ಕ್ ಜುಕರ್‌ಬರ್ಗ್ ನೇತೃತ್ವದಲ್ಲಿ ಮೆಟಾ ಸಂಸ್ಥೆಯು ಈಗ 'ಕೃತಕ ಬುದ್ಧಿಮತ್ತೆ' (AI) ತಂತ್ರಜ್ಞಾನದತ್ತ ಹೆಚ್ಚಿನ ಗಮನ ಹರಿಸುತ್ತಿದೆ. ಕೆಲಸದ ದಕ್ಷತೆ ಹೆಚ್ಚಿಸಲು ಮತ್ತು ವೆಚ್ಚ ತಗ್ಗಿಸಲು ಮಾನವ ಸಂಪನ್ಮೂಲದ ಬದಲಾಗಿ ಎಐ ತಂತ್ರಜ್ಞಾನವನ್ನು ಬಳಸಿಕೊಳ್ಳಲು ಕಂಪನಿ ನಿರ್ಧರಿಸಿರುವುದು ಈ ಬೃಹತ್ ಲೇ-ಆಫ್‌ಗೆ ಮುಖ್ಯ ಕಾರಣವಾಗಿದೆ.

Category
ಕರಾವಳಿ ತರಂಗಿಣಿ