ಮಂಗಳೂರು: ಕೋಟ ಶ್ರೀನಿವಾಸ ಪೂಜಾರಿಯವರ ರಾಜಿನಾಮೆಯಿಂದ ತೆರವಾದ ಎಂಎಲ್‌ಸಿ ಸ್ಥಾನಕ್ಕೆ ಅಕ್ಟೋಬರ್ 21ರಂದು ನಡೆಯುವ ಉಪಚುನಾವಣೆಗೆ ಗುರುವಾರ ಬಿಜೆಪಿ, ಕಾಂಗ್ರೆಸ್ ಮತ್ತು ಎಸ್‌ಡಿಪಿಐ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಇಂದು ಮೂವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಈ ಹಿಂದೆ ಪಕ್ಷೇತರ ಅಭ್ಯರ್ಥಿ ಒಬ್ಬರು ನಾಮಪತ್ರ ಸಲ್ಲಿಸಿದ್ದು, ಈವರೆಗೆ ಒಟ್ಟು ನಾಲ್ಕು ಮಂದಿ ನಾಮಪತ್ರ ಸಲ್ಲಿಸಿದಂತಾಗಿದೆ.
ಇಂದು ಬಿಜೆಪಿಯಿಂದ ಕಿಶೋರ್ ಕುಮಾರ್ ಪುತ್ತೂರು, ಕಾಂಗ್ರೆಸ್‌ನಿಂದ ರಾಜು ಪೂಜಾರಿ ಮತ್ತು ಎಸ್‌ಡಿಪಿಐನಿಂದ ಅನ್ವರ್ ಸಾದತ್ ಬಜತ್ತೂರು ನಾಮಪತ್ರ ಸಲ್ಲಿಸಿದರು.
ಮೂವರು ಅಭ್ಯರ್ಥಿಗಳು ಡಿಸಿ ಆಫೀಸ್‌ಗೆ ಆಗಮಿಸಿ ಚುನಾವಣಾ ಅಧಿಕಾರಿಯೂ ಆಗಿರುವ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರಿಗೆ ನಾಮಪತ್ರ ಸಲ್ಲಿಸಿದರು.