image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಕರ್ನಾಟಕದಲ್ಲಿ ಆಟೋ ಎಲ್‌ಪಿಜಿ ಸರಬರಾಜು ಸುಗಮ: ಕೊರತೆಯಿಲ್ಲವೆಂದು ಇಲಾಖೆ ಸ್ಪಷ್ಟನೆ

ಕರ್ನಾಟಕದಲ್ಲಿ ಆಟೋ ಎಲ್‌ಪಿಜಿ ಸರಬರಾಜು ಸುಗಮ: ಕೊರತೆಯಿಲ್ಲವೆಂದು ಇಲಾಖೆ ಸ್ಪಷ್ಟನೆ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಆಟೋ ಎಲ್‌ಪಿಜಿ ಸೇರಿದಂತೆ ಎಲ್ಲಾ ರೀತಿಯ ಎಲ್‌ಪಿಜಿ ಸರಬರಾಜು ಯಾವುದೇ ಅಡೆತಡೆಯಿಲ್ಲದೆ ನಡೆಯುತ್ತಿದ್ದು, ಆತಂಕಪಡುವ ಅಗತ್ಯವಿಲ್ಲ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಸ್ಪಷ್ಟಪಡಿಸಿದೆ.

ರಾಜ್ಯದಲ್ಲಿ ಎಲ್‌ಪಿಜಿ ಸರಬರಾಜು ವ್ಯವಸ್ಥೆಯನ್ನು ಸರ್ಕಾರವು ನಿರಂತರವಾಗಿ ಗಮನಿಸುತ್ತಿದ್ದು, ಸದ್ಯಕ್ಕೆ ಯಾವುದೇ ಕೊರತೆ ಇಲ್ಲ ಎಂದು ಇಲಾಖೆ ತಿಳಿಸಿದೆ. ರಾಜ್ಯದಾದ್ಯಂತ ಒಟ್ಟು 72 ಆಟೋ ಎಲ್‌ಪಿಜಿ ಡಿಸ್ಪೆನ್ಸಿಂಗ್ ಸ್ಟೇಷನ್‌ಗಳು (ALDS) ಕಾರ್ಯನಿರ್ವಹಿಸುತ್ತಿದ್ದು, ಇದರಲ್ಲಿ ಬೆಂಗಳೂರು ನಗರದಲ್ಲಿ ಮಾತ್ರ 31 ಕೇಂದ್ರಗಳು ಸೇವೆ ನೀಡುತ್ತಿವೆ. ಸಾರ್ವಜನಿಕ ತೈಲ ಕಂಪನಿಗಳಾದ ಐಒಸಿಎಲ್ (IOCL), ಬಿಪಿಸಿಎಲ್ (BPCL) ಮತ್ತು ಎಚ್‌ಪಿಸಿಎಲ್ (HPCL) ಮೂಲಕ ಪ್ರತಿ ಲೀಟರ್‌ಗೆ 77.74 ರೂ. ದರದಲ್ಲಿ ಆಟೋ ಎಲ್‌ಪಿಜಿ ಪೂರೈಕೆ ಮಾಡಲಾಗುತ್ತಿದೆ. ಕಳೆದ ವಾರದಲ್ಲಿ ದಿನಕ್ಕೆ ಸರಾಸರಿ 64.9 ಮೆಟ್ರಿಕ್ ಟನ್ ಆಟೋ ಎಲ್‌ಪಿಜಿ ವಿತರಣೆಯಾಗಿದ್ದು, ಇದು ಹಿಂದಿನ ದೈನಂದಿನ ಸರಾಸರಿ 57.6 ಮೆಟ್ರಿಕ್ ಟನ್‌ಗಿಂತ ಹೆಚ್ಚಾಗಿದೆ. ಇನ್ನು ರಾಜ್ಯದಲ್ಲಿ ಪ್ರತಿದಿನ ಸುಮಾರು 4 ಲಕ್ಷ ಗೃಹ ಬಳಕೆ ಮತ್ತು 18,000 ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳನ್ನು ಯಾವುದೇ ಅಡಚಣೆಯಿಲ್ಲದೆ ಪೂರೈಕೆ ಮಾಡಲಾಗುತ್ತಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

Category
ಕರಾವಳಿ ತರಂಗಿಣಿ