image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಸಿಇಟಿ ಪರೀಕ್ಷೆಯಲ್ಲಿ ಹಿಂದೂ ನಂಬಿಕೆಗಳಿಗೆ ಅವಮಾನ: ಶಾಸಕ ಭರತ್ ಶೆಟ್ಟಿ ಆಕ್ರೋಶ

ಸಿಇಟಿ ಪರೀಕ್ಷೆಯಲ್ಲಿ ಹಿಂದೂ ನಂಬಿಕೆಗಳಿಗೆ ಅವಮಾನ: ಶಾಸಕ ಭರತ್ ಶೆಟ್ಟಿ ಆಕ್ರೋಶ

ಮಂಗಳೂರು: ಕರ್ನಾಟಕ ಸಿಇಟಿ ಪರೀಕ್ಷಾ ಕೇಂದ್ರಗಳಲ್ಲಿ ಹಿಂದೂ ವಿದ್ಯಾರ್ಥಿಗಳ ಜನಿವಾರ, ಕೈದಾರ ಹಾಗೂ ಕಿವಿಯೋಲೆಗಳನ್ನು ಬಲವಂತವಾಗಿ ತೆಗೆಸುವ ಮೂಲಕ ರಾಜ್ಯ ಸರ್ಕಾರವು ಹಿಂದೂ ಧರ್ಮದ ನಂಬಿಕೆ ಮತ್ತು ಆಚರಣೆಗಳಿಗೆ ಅಪಮಾನ ಮಾಡುತ್ತಿದೆ ಎಂದು ಶಾಸಕ ಡಾ. ವೈ. ಭರತ್ ಶೆಟ್ಟಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, "ಪರೀಕ್ಷಾ ಕೇಂದ್ರಗಳಲ್ಲಿ ಪಾರದರ್ಶಕವಾಗಿ ಕಾಣುವ ಆಭರಣಗಳು ಹಾಗೂ ಧಾರ್ಮಿಕ ಸಂಕೇತಗಳನ್ನು ಕಳಚುವಂತೆ ಮಾಡುವುದು ವಿದ್ಯಾರ್ಥಿಗಳ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ. ಕಳೆದ ವರ್ಷವೂ ಇಂತಹ ಘಟನೆಗಳು ನಡೆದಿದ್ದರೂ ಸರ್ಕಾರ ಯಾವುದೇ ಎಚ್ಚೆತ್ತುಕೊಂಡಿಲ್ಲ. ಒಂದು ಕಡೆ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡುತ್ತಿರುವ ಕಾಂಗ್ರೆಸ್ ಸರ್ಕಾರ, ಇನ್ನೊಂದೆಡೆ ಹಿಂದೂ ವಿದ್ಯಾರ್ಥಿಗಳ ಧಾರ್ಮಿಕ ವಿಧಿವಿಧಾನಗಳಿಗೆ ಅಡ್ಡಿಪಡಿಸುತ್ತಿದೆ. ಇದು ಸರ್ಕಾರದ ಸ್ಪಷ್ಟ ತುಷ್ಟೀಕರಣ ನೀತಿಯನ್ನು ಎತ್ತಿ ತೋರಿಸುತ್ತದೆ" ಎಂದು ಕಿಡಿಕಾರಿದ್ದಾರೆ.

"ಸರ್ಕಾರವು ಉದ್ದೇಶಪೂರ್ವಕವಾಗಿ ಹಿಂದೂ ಸಮಾಜವನ್ನು ಕೆರಳಿಸುವ ಕೆಲಸ ಮಾಡುತ್ತಿದ್ದು, ಹೋರಾಟಕ್ಕೆ ಪ್ರೇರೇಪಿಸುತ್ತಿದೆ. ತಕ್ಷಣವೇ ಇಂತಹ ತಾರತಮ್ಯದ ಕ್ರಮಗಳನ್ನು ನಿಲ್ಲಿಸಿ, ಪರೀಕ್ಷಾ ನಿಯಮಗಳಲ್ಲಿ ಸಮಾನತೆಯನ್ನು ಕಾಪಾಡಬೇಕು. ಇಲ್ಲದಿದ್ದರೆ ಹಿಂದೂ ಸಮುದಾಯದ ಆಕ್ರೋಶ ಎದುರಿಸಬೇಕಾಗುತ್ತದೆ," ಎಂದು ಎಚ್ಚರಿಸಿದ ಶಾಸಕರು, ಈ ಕೂಡಲೇ ಮುಖ್ಯಮಂತ್ರಿಗಳು ಹಿಂದೂ ಸಮಾಜದ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದಾರೆ.

Category
ಕರಾವಳಿ ತರಂಗಿಣಿ