image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಸಾರ್ವಜನಿಕ ಸ್ಥಳದಲ್ಲಿ ಧಾರ್ಮಿಕ ಪ್ರಾರ್ಥನೆ "ಹಕ್ಕು" ಅಲ್ಲ: ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು

ಸಾರ್ವಜನಿಕ ಸ್ಥಳದಲ್ಲಿ ಧಾರ್ಮಿಕ ಪ್ರಾರ್ಥನೆ "ಹಕ್ಕು" ಅಲ್ಲ: ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು

ಅಲಹಾಬಾದ್ : ಸಾರ್ವಜನಿಕ ಸ್ಥಳಗಳಲ್ಲಿ ಧಾರ್ಮಿಕ ಪ್ರಾರ್ಥನೆ ಅಥವಾ ದೊಡ್ಡ ಮಟ್ಟದ ಸಭೆಗಳನ್ನು ನಡೆಸುವುದು ಮೂಲಭೂತ ಹಕ್ಕಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯ ಇಕೋನಾ ಗ್ರಾಮದ ಆಸೀನ್ ಎಂಬುವವರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸರಳ್ ಶ್ರೀವಾಸ್ತವ ಮತ್ತು ನ್ಯಾಯಮೂರ್ತಿ ಗರಿಮಾ ಪ್ರಸಾದ್ ಅವರಿದ್ದ ಪೀಠವು, ಸಂವಿಧಾನವು ಧಾರ್ಮಿಕ ಸ್ವಾತಂತ್ರ್ಯವನ್ನು ನೀಡಿದ್ದರೂ ಅದು ಸಾರ್ವಜನಿಕ ಸುವ್ಯವಸ್ಥೆ, ನೈತಿಕತೆ ಮತ್ತು ಇತರರ ಹಿತಾಸಕ್ತಿಗೆ ಒಳಪಟ್ಟಿರುತ್ತದೆ ಎಂದು ಸ್ಪಷ್ಟಪಡಿಸಿದೆ. ತಮಗೆ ಉಡುಗೊರೆಯಾಗಿ ಬಂದಿರುವ ಖಾಸಗಿ ಜಾಗದಲ್ಲಿ ಪ್ರಾರ್ಥನೆ ಸಲ್ಲಿಸಲು ಅಧಿಕಾರಿಗಳು ಅಡ್ಡಿಪಡಿಸುತ್ತಿದ್ದಾರೆ ಎಂಬ ಅರ್ಜಿದಾರರ ವಾದವನ್ನು ತಳ್ಳಿಹಾಕಿದ ನ್ಯಾಯಾಲಯವು, ಕಂದಾಯ ದಾಖಲೆಗಳ ಪ್ರಕಾರ ಆ ಭೂಮಿಯು 'ಅಬಾದಿ' ಅಥವಾ ಸಾರ್ವಜನಿಕ ಬಳಕೆಯ ಜಾಗವಾಗಿದೆ ಎಂದು ಗುರುತಿಸಿದೆ. ಹೊರಗಿನ ಜನರನ್ನು ಸೇರಿಸಿ ನಡೆಸುವ ಸಾಮೂಹಿಕ ಪ್ರಾರ್ಥನೆಗಳು ಸಾರ್ವಜನಿಕ ಸ್ವರೂಪ ಪಡೆದುಕೊಳ್ಳುವುದರಿಂದ ಅಂತಹ ಸಂದರ್ಭಗಳಲ್ಲಿ ಸರ್ಕಾರದ ನಿಯಮ ಪಾಲಿಸುವುದು ಕಡ್ಡಾಯವಾಗುತ್ತದೆ. ಸಾರ್ವಜನಿಕ ಜಾಗಗಳನ್ನು ಪುನರಾವರ್ತಿತ ಧಾರ್ಮಿಕ ಚಟುವಟಿಕೆಗಳಿಗೆ ಮೀಸಲಿಡಲು ಸಾಧ್ಯವಿಲ್ಲ ಹಾಗೂ ಶಾಂತಿ ಕಾಪಾಡುವ ದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವ ಅಧಿಕಾರ ಸರ್ಕಾರಕ್ಕಿದೆ ಎಂದು ತಿಳಿಸಿದ ಹೈಕೋರ್ಟ್, ಮಾಲೀಕತ್ವ ಸಾಬೀತುಪಡಿಸಲು ವಿಫಲರಾದ ಅರ್ಜಿದಾರರ ಮನವಿಯನ್ನು ವಜಾಗೊಳಿಸಿದೆ. ಈ ಮೂಲಕ ವೈಯಕ್ತಿಕ ಧಾರ್ಮಿಕ ಆಚರಣೆಗಳು ಸಾರ್ವಜನಿಕರಿಗೆ ತೊಂದರೆಯಾಗದಂತೆ ಇರಬೇಕು ಎಂಬ ಬಲವಾದ ಸಂದೇಶವನ್ನು ನ್ಯಾಯಾಲಯ ರವಾನಿಸಿದೆ.

Category
ಕರಾವಳಿ ತರಂಗಿಣಿ