image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ :ನಾಳೆಯೇ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ?

ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ :ನಾಳೆಯೇ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ?

ನವದೆಹಲಿ: ಕರ್ನಾಟಕ ರಾಜಕಾರಣದಲ್ಲಿ ಕ್ಷಣ ಕ್ಷಣಕ್ಕೂ ಕುತೂಹಲದ ಸುದ್ದಿಗಳು ಹೊರಬೀಳುತ್ತಿದ್ದು, ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ನಾಳೆಯೇ ರಾಜೀನಾಮೆ ನೀಡಲಿದ್ದಾರೆ ಎಂದು ವರದಿಯಾಗಿದೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಬೆಳವಣಿಗೆಗಳು ಅತ್ಯಂತ ವೇಗವಾಗಿ ಪಡೆದುಕೊಂಡಿದ್ದು, ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಮಹತ್ವದ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮೂಲಗಳ ಪ್ರಕಾರ, 2023ರ ವಿಧಾನಸಭಾ ಚುನಾವಣೆಯ ಭರ್ಜರಿ ಯಶಸ್ಸಿನ ನಂತರ ಪಕ್ಷದೊಳಗೆ ಮಾಡಿಕೊಳ್ಳಲಾಗಿದ್ದ ಆಂತರಿಕ ಅಧಿಕಾರ ಹಂಚಿಕೆಯ ಒಪ್ಪಂದದ ಅನ್ವಯ ಈ ಪ್ರಮುಖ ತೀರ್ಮಾನವನ್ನು ತೆಗೆದುಕೊಳ್ಳಲಾಗುತ್ತಿದೆ ಎನ್ನಲಾಗಿದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಸುಮಾರು ಮೂರು ವರ್ಷಗಳು ಪೂರೈಸುತ್ತಿರುವ ಈ ಸಂದರ್ಭದಲ್ಲಿ ಈ ಮಹತ್ವದ ನಾಯಕತ್ವ ಬದಲಾವಣೆ ನಡೆಯುತ್ತಿದ್ದು, ಪ್ರಸ್ತುತ ಉಪಮುಖ್ಯಮಂತ್ರಿಯಾಗಿರುವ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವ ದಟ್ಟ ಸಾಧ್ಯತೆಗಳಿವೆ.

ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗೌರವಯುತ ನಿರ್ಗಮನ ನೀಡಲು ಮುಂದಾಗಿರುವ ಕಾಂಗ್ರೆಸ್ ಹೈಕಮಾಂಡ್, ಅವರಿಗೆ ರಾಜ್ಯಸಭಾ ಸ್ಥಾನ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಪ್ರಮುಖ ಜವಾಬ್ದಾರಿಯನ್ನು ನೀಡಲು ಮುಂದಾಗಿದೆ ಎಂದು ತಿಳಿದುಬಂದಿದೆ. ಸಿದ್ದರಾಮಯ್ಯ ಅವರು ಕೂಡ ಹೈಕಮಾಂಡ್‌ನ ಈ ತೀರ್ಮಾನಕ್ಕೆ ಸಂಪೂರ್ಣವಾಗಿ ಬದ್ಧವಾಗಿರುವುದಾಗಿ ತಮ್ಮ ಆಪ್ತರು ಹಾಗೂ ಬೆಂಬಲಿಗರಿಗೆ ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ. ಒಟ್ಟಾರೆ ದೆಹಲಿಯಲ್ಲಿ ನಡೆದ ಹೈವೋಲ್ಟೇಜ್ ಸಭೆಯ ನಂತರ ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಬದಲಾವಣೆಯ ಪರ್ವ ಅಧಿಕೃತವಾಗಿ ಆರಂಭವಾಗಿದ್ದು, ಇಡೀ ರಾಜ್ಯದ ಜನರ ಗಮನ ಈಗ ಮುಂದಿನ ರಾಜಕೀಯ ಬೆಳವಣಿಗೆಗಳತ್ತ ನೆಟ್ಟಿದೆ.

Category
ಕರಾವಳಿ ತರಂಗಿಣಿ