ಬೆಂಗಳೂರು: ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ರಾಜ್ಯದ ಮುಂದಿನ ಮುಖ್ಯಮಂತ್ರಿ ಮತ್ತು ಸಂಪುಟ ಸಚಿವರ ಪ್ರಮಾಣ ವಚನ ಸ್ವೀಕಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ರಾಜ್ಯಪಾಲರಿಗೆ ಅಧಿಕೃತ ಪತ್ರವನ್ನು ಸಲ್ಲಿಸಿದ್ದಾರೆ.
ಲಭ್ಯವಿರುವ ಮಾಹಿತಿ ಪ್ರಕಾರ, ಡಿ.ಕೆ. ಶಿವಕುಮಾರ್ ಅವರು ತಾವೇ ಮುಖ್ಯಮಂತ್ರಿಯಾಗಿ ಮತ್ತು ಡಾ. ಜಿ. ಪರಮೇಶ್ವರ್ ಅವರನ್ನು ಉಪಮುಖ್ಯಮಂತ್ರಿಯಾಗಿ ನೇಮಿಸಲು ಕೋರಿದ್ದಾರೆ. ಇವರೊಂದಿಗೆ ಕೆ.ಎಚ್. ಮುನಿಯಪ್ಪ, ಕೆ.ಜೆ. ಜಾರ್ಜ್, ಎಂ.ಬಿ. ಪಾಟೀಲ್, ರಾಮಲಿಂಗ ರೆಡ್ಡಿ, ಸತೀಶ್ ಜಾರಕಿಹೊಳಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಯು.ಟಿ. ಖಾದರ್, ಈಶ್ವರ್ ಖಂಡ್ರೆ, ಯತೀಂದ್ರ ಸಿದ್ದರಾಮಯ್ಯ, ಬೈರತಿ ಸುರೇಶ್ ಮತ್ತು ಶರಣ ಪ್ರಕಾಶ್ ಪಾಟೀಲ್ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲು ಪಟ್ಟಿಯಲ್ಲಿ ಹೆಸರುಗಳನ್ನು ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.