image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಸತ್ಯ ಬಹಿರಂಗಪಡಿಸಿದರೆ ಸಂಕಷ್ಟ ಕಟ್ಟಿಟ್ಟ ಬುತ್ತಿ; ರಾಮಮಂದಿರ ದೇಣಿಗೆ ದುರುಪಯೋಗದ ಬಗ್ಗೆ ಬ್ರಿಜ್ ಭೂಷಣ್ ಸಿಂಗ್ ಸ್ಫೋಟಕ ಹೇಳಿಕೆ

ಸತ್ಯ ಬಹಿರಂಗಪಡಿಸಿದರೆ ಸಂಕಷ್ಟ ಕಟ್ಟಿಟ್ಟ ಬುತ್ತಿ; ರಾಮಮಂದಿರ ದೇಣಿಗೆ ದುರುಪಯೋಗದ ಬಗ್ಗೆ ಬ್ರಿಜ್ ಭೂಷಣ್ ಸಿಂಗ್ ಸ್ಫೋಟಕ ಹೇಳಿಕೆ

ಉತ್ತರಪ್ರದೇಶ : ಅಯೋಧ್ಯೆ ರಾಮಮಂದಿರಕ್ಕೆ ಬಂದ ದೇಣಿಗೆ ಹಣ ದುರುಪಯೋಗಪಡಿಸಿಕೊಳ್ಳಲಾಗಿದೆ ಎಂಬ ಗಂಭೀರ ಆರೋಪಗಳ ನಡುವೆಯೇ, ಬಿಜೆಪಿ ನಾಯಕ ಹಾಗೂ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. 'ಅಯೋಧ್ಯೆ ರಾಮಮಂದಿರದ ದೇಣಿಗೆ ದುರುಪಯೋಗದ ಬಗ್ಗೆ ನನ್ನ ಬಳಿ ಸಂಪೂರ್ಣ ಮಾಹಿತಿ ಇದೆ. ಆದರೆ, ಈಗ ಆ ಸತ್ಯವನ್ನು ಬಹಿರಂಗಪಡಿಸುವ ಸ್ಥಿತಿಯಲ್ಲಿ ನಾನಿಲ್ಲ' ಎಂದು ಅವರು ಹೇಳಿದ್ದಾರೆ.

ವಿಷ್ಣೋಹರಪುರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಂಗ್, "ಅವರಿಗೆ ಹೋಲಿಸಿದರೆ ನಾನು ತುಂಬಾ ದುರ್ಬಲ ವ್ಯಕ್ತಿಯಾಗಿದ್ದೇನೆ. ಒಂದು ವೇಳೆ ನಾನು ಈಗ ಸತ್ಯವನ್ನು ಮಾತನಾಡಿದರೆ ನನಗೆ ಸಂಕಷ್ಟ ಕಟ್ಟಿಟ್ಟ ಬುತ್ತಿ. ಅವರು ತುಂಬಾ ಪ್ರಭಾವಶಾಲಿಗಳಾಗಿದ್ದಾರೆ. ಸದ್ಯಕ್ಕೆ ಸತ್ಯ ಮಾತನಾಡುವ ಧೈರ್ಯ ನನಗಿಲ್ಲ. ಆದರೆ, ಸಮಯ ಬಂದಾಗ ಖಂಡಿತವಾಗಿಯೂ ನಾನು ಮಾತನಾಡುತ್ತೇನೆ," ಎಂದು ತಿಳಿಸಿದ್ದಾರೆ. ಆದರೆ, ತಾವು ಉಲ್ಲೇಖಿಸಿದ ಆ ಪ್ರಭಾವಿ 'ಅವರು' ಯಾರು ಎಂಬುದನ್ನು ಮಾತ್ರ ಸಿಂಗ್ ಎಲ್ಲೂ ಸ್ಪಷ್ಟಪಡಿಸಿಲ್ಲ.

ಇದೇ ಸಂದರ್ಭದಲ್ಲಿ ದೇಶಾದ್ಯಂತ ತಲ್ಲಣ ಮೂಡಿಸಿರುವ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ಕುರಿತು ಪ್ರತಿಕ್ರಿಯಿಸಿದ ಅವರು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಬೆಂಬಲಕ್ಕೆ ನಿಂತಿದ್ದಾರೆ. "ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯಿಂದ ಈ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ. ಬದಲಿಗೆ, ಈ ಹಗರಣದ ಹಿಂದೆ ಇರುವ ಮತ್ತು ಇದರಲ್ಲಿ ಭಾಗಿಯಾಗಿರುವ ಅಸಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು," ಎಂದು ಸಿಂಗ್ ಒತ್ತಾಯಿಸಿದ್ದಾರೆ.

Category
ಕರಾವಳಿ ತರಂಗಿಣಿ