image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮಂಗಳೂರು: ಕುಡ್ಲದ ಪಿಲಿ ಪರ್ಬ 2024 ಕ್ಕೆ ಅದ್ದೂರಿ ಚಾಲನೆ

ಮಂಗಳೂರು: ಕುಡ್ಲದ ಪಿಲಿ ಪರ್ಬ 2024 ಕ್ಕೆ ಅದ್ದೂರಿ ಚಾಲನೆ

ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಶ್ರೀ ನಳಿನ್ ಕುಮಾರ್ ಕಟೀಲ್ ರವರ ಮಾರ್ಗದರ್ಶನ ಹಾಗೂ ಶಾಸಕರಾದ ಶ್ರೀ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಗರದ ಕೇಂದ್ರ ಮೈದಾನದಲ್ಲಿ ನಡೆಯುತ್ತಿರುವ ಕುಡ್ಲದ ಪಿಲಿಪರ್ಬ-2024 ಸೀಸನ್ 3 ರ ಉದ್ಘಾಟನಾ ಸಮಾರಂಭವು ಧಾರ್ಮಿಕ ವಿಧಿವಿಧಾನಗಳನ್ವಯ ಗಣಹೋಮದ ನಂತರ ಹಲವು ಗಣ್ಯರ ಉಪಸ್ಥಿತಿಯಲ್ಲಿ ನಡೆಯಿತು.

ಪಿಲಿಪರ್ಬವು ತುಳುನಾಡಿನ ಗತವೈಭವದ ಘನಪರಂಪರೆಯನ್ನು ಮೆಲುಕು ಹಾಕುವ ಹಾಗೂ ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನ ಪ್ರಯತ್ನವಾಗಿದ್ದು ಸಾಂಪ್ರದಾಯಿಕ ಕಲೆಯಾಗಿರುವ ಈ ಹುಲಿವೇಷಕ್ಕೆ ಇಂದು ಸ್ಪರ್ಧಾಕೂಟದ ಸ್ಪರ್ಶ ಲಭಿಸಿದೆ. ಜಿಲ್ಲೆಯ ಅನುಭವಿ ಹಾಗೂ ನುರಿತ ತೀರ್ಪುಗಾರರ ಸಮ್ಮುಖದಲ್ಲಿ ನಡೆಯಲಿರುವ ಈ ಸ್ಪರ್ಧೆಯಲ್ಲಿ ಭಾಗವಹಿಸಲಿರುವ ಎಲ್ಲಾ 10 ಹುಲಿವೇಷ ತಂಡಗಳಿಗೂ ಗಣ್ಯರು ಶುಭ ಹಾರೈಸಿ ಹುಲಿವೇಷ ತಂಡಗಳನ್ನು ಪ್ರೋತ್ಸಾಹಿಸಲು ಆಗಮಿಸಿದ ಎಲ್ಲರಿಗೂ ಹಾರ್ದಿಕ ಸ್ವಾಗತವನ್ನು ಕೋರಿದರು.

ಸ್ಪರ್ಧಾಕೂಟವು ಇಂದು ರಾತ್ರಿಯವರೆಗೂ  ಅದ್ದೂರಿಯಾಗಿ ಸಾಗಲಿದ್ದು ಅಂತಿಮವಾಗಿ ವಿಜೇತ ತಂಡದ ಘೋಷಣೆಯಾಗಲಿದೆ. ಈ ನಡುವೆ ವೀಕ್ಷಕರಿಗಾಗಿ ಕಾರ್ಯಕ್ರಮದ ನೇರ ಪ್ರಸಾರದ ವ್ಯವಸ್ಥೆಯನ್ನೂ ಮಾಡಲಾಗಿರುವುದು ವಿಶೇಷ.

ಉದ್ಘಾಟನಾ ಸಮಾರಂಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ, ಶ್ರೀ ಸತೀಶ್ ಕುಂಪಲ, ಸಂಸದ ಕ್ಯಾ. ಬ್ರಿಜೇಶ್ ಚೌಟ, ಮೇಯರ್ ಮನೋಜ್ ಕುಮಾರ್ ಕೋಡಿಕಲ್, ಉಪ ಮೇಯರ್ ಭಾನುಮತಿ, ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಶ್ರೀ ರಾಜೇಂದ್ರ ಕುಮಾರ್, ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್, ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಶ್ರೀ ಗಿರಿಧರ್ ಶೆಟ್ಟಿ, ಅಧ್ಯಕ್ಷರಾದ ಶ್ರೀ ದಿವಾಕರ್ ಪಾಂಡೇಶ್ವರ, ಪ್ರಮುಖರಾದ ಶ್ರೀ ನರೇಶ್ ಶೆಣೈ, ಲಲಿತ್ ಮೆಂಡನ್, ಶಾನ್ ಕೋಡಿಕೆರೆ, ಜಗದೀಶ್ ಕದ್ರಿ, ಅಶ್ವಿತ್ ಕೊಟ್ಟಾರಿ  ಸೇರಿದಂತೆ ಮ.ನ.ಪಾ ಸದಸ್ಯರು ಹಾಗೂ ಅನೇಕ ಪ್ರಮುಖರು ಉಪಸ್ಥಿತರಿದ್ದರು.

 

Category
ಕರಾವಳಿ ತರಂಗಿಣಿ