image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಕಂಕನಾಡಿ ದುರಂತ: ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಶಾಸಕ ವೇದವ್ಯಾಸ ಕಾಮತ್ ಆಗ್ರಹ

ಕಂಕನಾಡಿ ದುರಂತ: ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಶಾಸಕ ವೇದವ್ಯಾಸ ಕಾಮತ್ ಆಗ್ರಹ

ಮಂಗಳೂರು: ನಗರದಲ್ಲಿ ಕಳೆದ ರಾತ್ರಿಯಿಂದ ಸುರಿದ ಭಾರೀ ಮಳೆಯ ಕಾರಣಕ್ಕೆ ಕಂಕನಾಡಿ ಸಮೀಪ ತಡೆಗೋಡೆ ಕುಸಿದು, ಮನೆಯೊಂದರ ಮೇಲ್ಛಾವಣಿಗೆ ಬಿದ್ದ ಪರಿಣಾಮ ಓರ್ವ ಮಹಿಳೆ ಸೇರಿದಂತೆ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆಗೆ ಶಾಸಕ ವೇದವ್ಯಾಸ ಕಾಮತ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

​ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಶಾಸಕರು, ಮೃತಪಟ್ಟ ಕುಟುಂಬಕ್ಕೆ ಯಾವುದೇ ವಿಳಂಬವಿಲ್ಲದೆ ಸೂಕ್ತ ಪರಿಹಾರ ಲಭಿಸುವಂತೆ ಜಿಲ್ಲಾಧಿಕಾರಿಗಳೊಂದಿಗೆ ಈಗಾಗಲೇ ಮಾತುಕತೆ ನಡೆಸಿದ್ದೇನೆ ಎಂದು ತಿಳಿಸಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿರುವ ಅವರು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದು, ಅವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಬೇಕೆಂದು ಒತ್ತಾಯಿಸಿದ್ದಾರೆ.

ಹವಾಮಾನ ಇಲಾಖೆಯ ಮುನ್ನೆಚ್ಚರಿಕೆಯಂತೆ ಮಳೆ ಮುಂದುವರಿಯಲಿರುವ ಹಿನ್ನೆಲೆಯಲ್ಲಿ, ಜಿಲ್ಲಾಡಳಿತವು ಅಪಾಯಕಾರಿ ಪ್ರದೇಶಗಳಲ್ಲಿ ವಾಸಿಸುವ ಜನರ ರಕ್ಷಣೆಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಸಾರ್ವಜನಿಕರೂ ಎಚ್ಚರಿಕೆ ವಹಿಸಬೇಕು ಎಂದು ಶಾಸಕರು ಮನವಿ ಮಾಡಿದರು.

Category
ಕರಾವಳಿ ತರಂಗಿಣಿ