image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಈ ವಾರ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ ಕೆ ಶಿವಕುಮಾರ್

ಈ ವಾರ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: "ಈ ವಾರದೊಳಗೆ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ದೆಹಲಿಗೆ ಪ್ರಯಾಣ ಬೆಳೆಸುವ ಮುನ್ನ ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ,  "ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ನೀವು ಆತುರದಲ್ಲಿದ್ದೀರಿ"  ಈ ವಾರ ಸಚಿವ ಸಂಪುಟ ವಿಸ್ತರಣೆ ಪೂರ್ಣಗೊಳ್ಳುವುದು ಎಂದ ಅವರು,   "ಇಂದು ನಮ್ಮ ಸಂಸತ್ ಸದಸ್ಯರನ್ನು ಭೇಟಿ ಮಾಡುತ್ತಿದ್ದು, ಅವರಿಗೆ ರಾಜ್ಯದ ಬರ ಪರಿಸ್ಥಿತಿ, ನೀರಿನ ಪರಿಸ್ಥಿತಿ, ಕಾವೇರಿ, ಮಹದಾಯಿ, ಮೇಕೆದಾಟು, ಕೃಷ್ಣ ಸೇರಿದಂತೆ ಅನೇಕ ನೀರಾವರಿ ಯೋಜನೆಗಳ ಬಗ್ಗೆ ಮನವರಿಕೆ ಮಾಡಿಕೊಡಬೇಕಾಗಿದೆ" ಎಂದರು.

ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ
"ನಾನು ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಯಾವ ವಿಚಾರದಲ್ಲಿ ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗಬೇಕು ಎಂದು ಸಂಸದರಿಗೆ ಮನವಿ ಮಾಡಲು ಹೋಗುತ್ತಿದ್ದೇನೆ. ನಂತರ ಬೆಂಗಳೂರಿನಲ್ಲಿ ಸರ್ವಪಕ್ಷ ಸಭೆ ಕರೆಯಲಾಗುವುದು. ರಾಜ್ಯದ ಹಿರಿಯ ನಾಯಕರ ಜೊತೆಗೂ ಪ್ರಮುಖ ವಿಚಾರಗಳನ್ನು ಚರ್ಚಿಸಲಾಗುವುದು" ಎಂದು ತಿಳಿಸಿದರು.

Category
ಕರಾವಳಿ ತರಂಗಿಣಿ