image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ: ಜಿಲ್ಲಾಧಿಕಾರಿ ಪ್ರಕಟಣೆ

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ: ಜಿಲ್ಲಾಧಿಕಾರಿ ಪ್ರಕಟಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಉಪವಿಭಾಗದ ತಹಶೀಲ್ದಾರರ ಮನವಿ ಪ್ರಕಾರ, ಹಾಗೂ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಆಗಸ್ಟ್ 08, 2026 ರಂದು ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಉಪವಿಭಾಗದ ತಹಶೀಲ್ದಾರರ ವ್ಯಾಪ್ತಿಗೆ ಬರುವ ಪುತ್ತೂರು, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳ ಅಂಗನವಾಡಿ ಕೇಂದ್ರಗಳು, ಸರ್ಕಾರಿ ಹಾಗೂ ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು, ಪದವಿ ಪೂರ್ವ ಕಾಲೇಜುಗಳು, ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳು ಸೇರಿದಂತೆ ಎಲ್ಲಾ ಶಾಲಾ-ಕಾಲೇಜುಗಳಿಗೆ 08.08.2026 ರಂದು ರಜೆ ಘೋಷಿಸಲಾಗಿದೆ. ರಜೆ ಘೋಷಿಸಲಾಗಿರುವ ಕಾಲೇಜುಗಳ ವಿದ್ಯಾರ್ಥಿಗಳು ಅನಧಿಕೃತವಾಗಿ ಹೊರಗೆ ತಿರುಗಾಡುವುದನ್ನು ತಪ್ಪಿಸಲು ಮತ್ತು ಇದರ ಉಲ್ಲಂಘನೆ ಮಾಡಿದವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ರ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ.

ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶಗಳು, ಕೆರೆ ಹಾಗೂ ನದಿ ತೀರ ಅಥವಾ ಸಮುದ್ರ ತೀರಕ್ಕೆ ತೆರಳದಂತೆ ಎಚ್ಚರಿಕೆ ವಹಿಸಬೇಕು. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಾದ ಸೂಚನೆ ನೀಡಲಾಗಿದೆ. ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣೆಯನ್ನು ಚಾಚುತಪ್ಪದೆ ನಿರ್ವಹಿಸಲು ಸೂಚಿಸಲಾಗಿದೆ.

ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರು ಸಹಾಯಕ್ಕಾಗಿ ಟೋಲ್ ಫ್ರೀ ಸಂಖ್ಯೆ 1077 ಅಥವಾ 0824-2442590 ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ