image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಕಾವೇರಿ ವಿಚಾರದಲ್ಲಿ ರೈತರ ಹಿತ ಕಾಪಾಡುವುದು ನನ್ನ ಕರ್ತವ್ಯ: ಸಿಎಂ ಡಿ.ಕೆ. ಶಿವಕುಮಾರ್

ಕಾವೇರಿ ವಿಚಾರದಲ್ಲಿ ರೈತರ ಹಿತ ಕಾಪಾಡುವುದು ನನ್ನ ಕರ್ತವ್ಯ: ಸಿಎಂ ಡಿ.ಕೆ. ಶಿವಕುಮಾರ್

ಕೊಡಗು: ರಾಜ್ಯದ ಜಲಾಶಯಗಳು ಇನ್ನೂ ಸಂಪೂರ್ಣವಾಗಿ ತುಂಬಿಲ್ಲದಿರುವ ಹಿನ್ನೆಲೆಯಲ್ಲಿ, ನಮ್ಮ ರೈತರನ್ನು ಬದುಕಿಸುವ ಸವಾಲಿನ ಜೊತೆಗೆ ಕಾನೂನನ್ನೂ ಕಾಪಾಡುವುದು ಅತ್ಯಂತ ಮುಖ್ಯ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕೊಡಗಿನ ಭಾಗಮಂಡಲದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾವೇರಿ ವಿಚಾರದಲ್ಲಿ ರೈತರ ಹಿತ ಕಾಯುವುದು ತಮ್ಮ ಮೊದಲ ಕರ್ತವ್ಯ ಎಂದು ಸ್ಪಷ್ಟಪಡಿಸಿದ್ದಾರೆ.

ಕುಡಿಯುವ ನೀರು ಹಾಗೂ ಕೃಷಿಗೆ ಜಲಾಶಯಗಳಲ್ಲಿನ ನೀರಿನ ಲಭ್ಯತೆಯನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ಕೈಗೊಳ್ಳಲಾಗುವುದು. ಉತ್ತಮ ಮಳೆಯಾಗಿ ಬೆಳೆ ಸಮೃದ್ಧಿಯಾಗಬೇಕು ಮತ್ತು ರೈತರಿಗೆ ಅನ್ನ ಸಿಗಬೇಕು ಎಂಬುದು ಸರ್ಕಾರದ ಆಶಯವಾಗಿದೆ ಎಂದು ತಿಳಿಸಿದರು. ರಾಜ್ಯದ ಒಳಗೆ ಅಣೆಕಟ್ಟು ನಿರ್ಮಿಸಲು ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಅವಕಾಶವಿದ್ದು, ಮೇಕೆದಾಟು ನಿರ್ಮಾಣದಿಂದ ತಮಿಳುನಾಡಿಗೆ ನಿಗದಿಯಾಗಿರುವ ನೀರು ಹಂಚಿಕೆಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದರು.

ಯಾವುದೇ ಸಂಘಟನೆಯಾದರೂ ಕಾನೂನನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಹೇಳಿದ ಅವರು, ಸರ್ಕಾರದ ಅನುಮತಿ ಪಡೆದು ನಿಯಮಾನುಸಾರ ಕಾರ್ಯಕ್ರಮಗಳನ್ನು ನಡೆಸಲು ಅವಕಾಶವಿದೆ ಎಂದು ತಿಳಿಸಿದರು.

Category
ಕರಾವಳಿ ತರಂಗಿಣಿ