ಮಂಗಳೂರು: ವಿಕಲಚೇತನರ ವಿಶಿಷ್ಟ ಗುರುತಿನ ಚೀಟಿ ಕಾರ್ಡ್ಗಳಲ್ಲಿ ಆಗುತ್ತಿರುವ ಸಮಸ್ಯೆಗಳಿಗೆ ಆದಷ್ಟು ಬೇಗ ಪರಿಹಾರ ಕಂಡುಕೊಳ್ಳುವAತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ತಿಳಿಸಿದ್ದಾರೆ. ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಂಗವಿಕಲರ ಕುಂದು ಕೊರತೆಗಳ ನಿವಾರಣಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿಕಲಚೇತನರ ವಿಶಿಷ್ಟ ಗುರುತಿನ ಚೀಟಿ ಕಾರ್ಡ್ಗಳಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಮಾತನಾಡಿ ಸಮಸ್ಯೆಗೆ ಕಾರಣಗಳನ್ನು ಹುಡುಕಿ ಆದಷ್ಟು ಬೇಗ ವಿಕಲಚೇತನರ ವಿಶಿಷ್ಟ ಗುರುತಿನ ಕಾರ್ಡ್ ಸಮಸ್ಯೆ ಬಗೆಹರಿಯಬೇಕು ಎಂದು ಸೂಚಿಸಿದರು.
ಬೆಳ್ತಂಗಡಿ ತಾಲೂಕು ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಯುಡಿಐಡಿ ಕಾರ್ಡ್ ವಿತರಣೆ ಪ್ರಗತಿ ಕುಂಠಿತವಾ ಗಿರುವ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು, ಸಮಸ್ಯೆಗಳ ಬಗ್ಗೆ ಪರಿಶೀಲಿಸಿ, ಸಮಸ್ಯೆಯನ್ನು ಬಗೆಹರಿಸಿ, ಜಿಲ್ಲೆಯಲ್ಲಿರುವ ಒಟ್ಟು ಅಂಗವಿಕಲರ ಸಂಖ್ಯೆಗಳನ್ನು ಕಲೆ ಹಾಕಬೇಕು ಹಾಗೂ ೧೫ ದಿನಗಳೊಳಗೆ ಸಂಪೂರ್ಣ ಮಾಹಿತಿ ನೀಡುವಂತೆ ಹೇಳಿದರು. ವಿಕಲಚೇತನ ವಿದ್ಯಾರ್ಥಿ ವೇತನದ ಅರ್ಜಿಗಳನ್ನು ಆನ್‌ಲೈನ್ ಮೂಲಕ ಸಲ್ಲಿಸುವುದು ಕಷ್ಟವಾಗಿರುವುದರಿಂದ ಆಯಾ ಶಾಲೆಗಳ ಮೂಲಕವೇ ಅರ್ಜಿಗಳನ್ನು ಸಲ್ಲಿಸಲು ಕ್ರಮವಹಿಸಲು ಹೇಳಿದರು.
ವಿಕಲಚೇತನರಿಗೆ ಮಾಶಾಸನ ಸ್ಥಗಿತ ಗೊಂಡಿರುವ ಬಗ್ಗೆಯೂ ಸರಿಯಾದ ಕಾರಣಗಳನ್ನು ಹುಡುಕಿ ಪರಿಶೀಲಿಸುವಂತೆ ಸೂಚಿಸಿದರು. ಕೆಲವೊಂದು ಅಂಗವಿಕಲರ ಶಾಲೆಗಳಿಗೆ ಮೊದಲು ದೇವಾಲಯದಿಂದ ಊಟದ ವ್ಯವಸ್ಥೆ ನಡೆಯುತ್ತಿದ್ದು ಇದೀಗ ಸ್ಥಗಿತ ಗೊಂಡಿರುವ ಬಗ್ಗೆ ಸದಸ್ಯರು ತಿಳಿಸಿದರು.