ಬೆಂಗಳೂರು : ಪ್ರತಿಪಕ್ಷಗಳಿಗೆ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಎದುರಿಸಲು ಶಕ್ತಿಯಿಲ್ಲದ ಕಾರಣ, ಅಧಿವೇಶನದ ಕಾರ್ಯಕಲಾಪಗಳಿಗೆ ಅಡ್ಡಿಯುಂಟು ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ಅವರು ಇಂದು ಸ್ವಾತಂತ್ರ್ಯ ಉದ್ಯಾನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಸಚಿವ ನಾಗೇಂದ್ರ ಅವರ ರಾಜಿನಾಮೆ ಒತ್ತಾಯಿಸಿ ಪ್ರತಿಪಕ್ಷಗಳು ನಾಳೆ ವಿಧಾನಸೌಧದಲ್ಲಿ ಧರಣಿ ನಡೆಸಲು ಸಿದ್ಧತೆ ನಡೆಸಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, “ಇಲ್ಲಿ ನೆಲದ ಕಾನೂನಿದೆ. ಕಾನೂನಿನ ಚೌಕಟ್ಟಿನಲ್ಲಿ ಪ್ರತಿಭಟಿಸಲು ಅವಕಾಶವಿದೆ. ಇಂದು ಅವರು ಗೂಂಡಾಗಿರಿ ಮಾಡುತ್ತಿದ್ದಾರೆ. ಒಂದು ನೋಟೀಸ್ ಕೂಡ ಕೊಡದೇ ಅಧಿವೇಶನದ ಕಾರ್ಯಕಲಾಪಗಳನ್ನು ಹಾಳು ಮಾಡುತ್ತಿದ್ದಾರೆ. ಪ್ರತಿಪಕ್ಷಗಳು ಧರಣಿ ಮಾಡುವುದು ತಪ್ಪಲ್ಲ. ಆದರೆ ನೋಟೀಸು ನೀಡಿ ಚರ್ಚೆ ನಡೆಸಲಿ. ಸಚಿವರ ರಾಜಿನಾಮೆ ಏಕೆ ನೀಡಬೇಕು ಎಂಬುದನ್ನು ಚರ್ಚೆ ಮಾಡಲು ಪ್ರತಿಪಕ್ಷಗಳಿಗೆ ತಾಳ್ಮೆ ಇಲ್ಲ” ಎಂದರು.
ಪ್ರತಿಪಕ್ಷಗಳಿಗೆ ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರವನ್ನು ಎದುರಿಸಲು ಶಕ್ತಿಯಿಲ್ಲ. ಇದುವರೆಗೆ ಯಾವ ಸಚಿವರ ಮೇಲೆ ಹಾಗೂ ಕೇಂದ್ರದ ಎಷ್ಟು ಸಚಿವರ ಮೇಲೆ ಮೊಕದ್ದಮೆಗಳಿವೆ ಎಂದು ಅವರೇ ತಿಳಿಸಲಿ” ಎಂದರು