image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಪ್ರಹ್ಲಾದ್ ಜೋಶಿಗೆ ಸಂಬಂಧ ಪಡದ ಕೇಸ್‌ನಲ್ಲಿ ಕಾಂಗ್ರೆಸಿಗರು ಸುಖಾ ಸುಮ್ಮನೆ ರಾಜೀನಾಮೆ ಕೇಳ್ತಿದ್ದಾರೆ - ಬಿ ವೈ ವಿ

ಪ್ರಹ್ಲಾದ್ ಜೋಶಿಗೆ ಸಂಬಂಧ ಪಡದ ಕೇಸ್‌ನಲ್ಲಿ ಕಾಂಗ್ರೆಸಿಗರು ಸುಖಾ ಸುಮ್ಮನೆ ರಾಜೀನಾಮೆ ಕೇಳ್ತಿದ್ದಾರೆ - ಬಿ ವೈ ವಿ

ಬೆಂಗಳೂರು: ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್‌ ಜೋಶಿ ವಂಚನೆ ಪ್ರಕರಣವನ್ನು ಇಟ್ಟುಕೊಂಡು ಕಾಂಗ್ರೆಸಿಗರು ಜೋಶಿ ರಾಜೀನಾಮೆಗೆ ಒತ್ತಾಯಿಸುತ್ತಿರುವ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡುರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಪ್ರಹ್ಲಾದ್ ಜೋಶಿಗೆ ಸಂಬಂಧಪಡದ ಪ್ರಕರಣವೊಂದರಲ್ಲಿ ಕಾಂಗ್ರೆಸಿಗರು ಅಸಂಬದ್ಧವಾಗಿ ರಾಜೀನಾಮೆ ಕೇಳ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಹೆಸರನ್ನು ಸಂಬಂಧಪಡದ ಪ್ರಕರಣವೊದರಲ್ಲಿ ಎಳೆದು ತರುವ ಮೂಲಕ ಕಾಂಗ್ರೆಸ್ಸಿಗರು ವಿಲಕ್ಷಣ ಸಂತೋಷ ಪಡಲು ಹೊರಟಿದ್ದಾರೆ.  ಆರೋಪಿತ ಗೋಪಾಲ ಜೋಶಿ ಅವರೊಂದಿಗೆ ಕಳೆದ 32 ವರ್ಷಗಳಿಂದಲೂ ಸಂಪರ್ಕ ಕಡಿದುಕೊಂಡು ಯಾರೊಂದಿಗೂ ತಮ್ಮಸಂಬಂಧ ಬೆರೆಸದಂತೆ ಮಾನ್ಯ ಪ್ರಹ್ಲಾದ್ ಜೋಶಿ ಅವರು ನ್ಯಾಯಾಲಯದಲ್ಲಿ 2013ರಲ್ಲೇ ತಡೆಯಾಜ್ಞೆ ತಂದಿದ್ದಾರೆ. ಅಲ್ಲದೇ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಅದರ ವಿವರವಿರುವುದಾಗಿಯೂ ಸ್ಪಷ್ಟಪಡಿಸಿದ್ದಾರೆ. ಮುಡಾ ಹಾಗೂ ಮಹರ್ಷಿ ವಾಲ್ಮೀಕಿ ನಿಗಮದ ಹಗರಣದಂತೆ ಹತ್ತು-ಹಲವು ಹಗರಣಗಳಲ್ಲಿ ಸಿಲುಕಿ ತನಿಖೆ ಎದುರಿಸುತ್ತಿರುವ ಮುಖ್ಯಮಂತ್ರಿ ಹಾಗೂ ಇತರ ಮಂತ್ರಿಗಳು ನೈತಿಕತೆ ಗಾಳಿಗೆ ತೂರಿ ತಮ್ಮ ಸ್ಥಾನಗಳಿಗೆ ಭಂಡತನದಿಂದ ಅಂಟಿ ಕುಳಿತಿದ್ದಾರೆ ಎಂದರು.

ಹತಾಶೆಯ ಅಂಚಿಗೆ ತಲುಪಿರುವ ಕಾಂಗ್ರೆಸ್ಸಿಗರು ಜೋಶಿಯವರ ವಿಚಾರದಲ್ಲಿ 'ಮೊಸರಿನಲ್ಲಿ ಕಲ್ಲು ಹುಡುಕಲು ಹೊರಟಿದ್ದಾರೆ'. ಪ್ರಹ್ಲಾದ್ ಜೋಶಿ ಅವರು ತಮ್ಮ ಇಡೀ ರಾಜಕೀಯ ಜೀವನದಲ್ಲಿ ಒಂದೇ ಒಂದು ಕಪ್ಪು ಮಸಿ ಅಂಟಿಸಿಕೊಂಡವರಲ್ಲ ಅವರ ಸಾಮರ್ಥ್ಯ ಹಾಗೂ ಅನುಭವವನ್ನು ಪರಿಗಣಿಸಿ ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಸಂಪುಟದಲ್ಲಿ ಮಹತ್ವದ ಸ್ಥಾನ ಕಲ್ಪಿಸಿಕೊಟ್ಟಿದ್ದಾರೆ. ಇದನ್ನು ಸಹಿಸದ ಕೆಲವು ರಾಜಕೀಯ ಪಟ್ಟಭದ್ರಾ ಹಿತಾಸಕ್ತಿಗಳು ಜೋಶಿ ಅವರಿಗೆ ಕಳಂಕ ಅಂಟಿಸುವ ವಿಫಲ ಯತ್ನ ನಡೆಸಿದ್ದಾರೆ ಎಂದು ಬಿ ವೈ ವಿಜಯೇಂದ್ರ ಕಿಡಿಕಾರಿದರು.

Category
ಕರಾವಳಿ ತರಂಗಿಣಿ