image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಪಕ್ಷದ ನಿರ್ಧಾರಕ್ಕೆ ಬದ್ಧ, ನಾನು ಶಿಸ್ತಿನ ಸಿಪಾಯಿ: ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಪಕ್ಷದ ನಿರ್ಧಾರಕ್ಕೆ ಬದ್ಧ, ನಾನು ಶಿಸ್ತಿನ ಸಿಪಾಯಿ: ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಸಚಿವ ಸಂಪುಟದಿಂದ ಹೊರಗುಳಿದ ಬಳಿಕ ಮೊದಲ ಬಾರಿಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಹಾಗೂ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ತಾವು ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದು, ಹೈಕಮಾಂಡ್‌ನ ಪ್ರತಿಯೊಂದು ನಿರ್ಧಾರವನ್ನು ಸ್ವಾಗತಿಸುವುದಾಗಿ ತಿಳಿಸಿದ್ದಾರೆ.

ತಮ್ಮ ಇಲಾಖೆಯಲ್ಲಿ ಮೂರು ವರ್ಷಗಳ ಕಾಲ ಉತ್ತಮವಾಗಿ ಕೆಲಸ ಮಾಡಲು ಅವಕಾಶ ಮಾಡಿಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪಕ್ಷದ ನಾಯಕರಿಗೆ ಧನ್ಯವಾದ ಸಲ್ಲಿಸಿದ ಅವರು, "ನನಗೆ ಸಚಿವ ಸ್ಥಾನ ನೀಡುವಂತೆ ನಾನು ಯಾರ ಬಳಿಯೂ ಮನವಿ ಮಾಡಿಲ್ಲ ಅಥವಾ ಒತ್ತಾಯವನ್ನೂ ಹೇರಿಲ್ಲ. ರಾಜಕಾರಣ ಎಂಬುದು ಅತ್ಯಂತ ಅನಿಶ್ಚಿತತೆಯಿಂದ ಕೂಡಿದ್ದು, ಇಲ್ಲಿ ಬದಲಾವಣೆಗಳು ಸಹಜ. ಮುಂದೆ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ, ಅಥವಾ ನೀಡದಿದ್ದರೂ ಪಕ್ಷದ ಚೌಕಟ್ಟಿನಲ್ಲೇ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ" ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಕುರಿತು ಅಭಿಪ್ರಾಯ ಹಂಚಿಕೊಂಡ ಅವರು, ಮಹಿಳೆಯರಿಲ್ಲದ ಸಚಿವ ಸಂಪುಟ ಅಪೂರ್ಣ ಎನಿಸುತ್ತದೆ ಎಂದರು. ಜಾರ್ಖಂಡ್, ತೆಲಂಗಾಣ ಹಾಗೂ ಹಿಮಾಚಲ ಪ್ರದೇಶದ ಕಾಂಗ್ರೆಸ್ ಸರ್ಕಾರಗಳಲ್ಲಿ ಮಹಿಳೆಯರಿಗೆ ಆದ್ಯತೆ ನೀಡಲಾಗಿದೆ. ಕರ್ನಾಟಕದಲ್ಲಿ ನಿರ್ದಿಷ್ಟ ಲೆಕ್ಕಾಚಾರಗಳ ಆಧಾರದ ಮೇಲೆ ಈ ಬದಲಾವಣೆ ಆಗಿರಬಹುದು. ಸದ್ಯದಲ್ಲೇ ಮಹಿಳೆಯರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದು, ಆ ನಿರ್ಧಾರಕ್ಕಾಗಿ ಕಾಯುತ್ತಿರುವುದಾಗಿ ತಿಳಿಸಿದರು.

Category
ಕರಾವಳಿ ತರಂಗಿಣಿ