image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

2028ರ ಚುನಾವಣೆಗೆ ಈಶ್ವರಪ್ಪ ಸಿದ್ಧತೆ: ಶಿವಮೊಗ್ಗದಿಂದ ತಂದೆ ಅಥವಾ ಮಗ ಸ್ಪರ್ಧೆ

2028ರ ಚುನಾವಣೆಗೆ ಈಶ್ವರಪ್ಪ ಸಿದ್ಧತೆ: ಶಿವಮೊಗ್ಗದಿಂದ ತಂದೆ ಅಥವಾ ಮಗ ಸ್ಪರ್ಧೆ

ಶಿವಮೊಗ್ಗ : ​2024ರ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಇದೀಗ 2028ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ತಮ್ಮ ಅಖಾಡ ಸಜ್ಜುಗೊಳಿಸಲು ಆರಂಭಿಸಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಶಿವಮೊಗ್ಗ ನಗರ ಕ್ಷೇತ್ರದಿಂದ ತಾವಾಗಲಿ ಅಥವಾ ತಮ್ಮ ಪುತ್ರ ಕೆ.ಇ. ಕಾಂತೇಶ್ ಅವರಾಗಲಿ ಸ್ಪರ್ಧಿಸುವುದು ಖಚಿತ ಎಂದು ಅವರು ಘೋಷಣೆ ಮಾಡಿದ್ದಾರೆ.  

​ಈ ಚುನಾವಣಾ ಸಿದ್ಧತೆಯ ಭಾಗವಾಗಿ ಶಿವಮೊಗ್ಗ ನಗರದ ಫೇಸ್ ಕಾಲೇಜು ಸಭಾಂಗಣದಲ್ಲಿ 'ರಾಷ್ಟ್ರಭಕ್ತರ ಬಳಗ'ದ ವತಿಯಿಂದ ಬೂತ್ ಮಟ್ಟದ ಸಮಾವೇಶಕ್ಕೆ ಚಾಲನೆ ನೀಡಲಾಗಿದೆ. ಇದರೊಂದಿಗೆ ಶಿವಮೊಗ್ಗ ನಗರ ವ್ಯಾಪ್ತಿಯ ಒಟ್ಟು 297 ಬೂತ್‌ಗಳಲ್ಲಿ ಸಂಘಟನಾ ಚಟುವಟಿಕೆಗಳು ಅಧಿಕೃತವಾಗಿ ಚಾಲನೆ ಪಡೆದುಕೊಂಡಿವೆ.  

​ಬೂತ್ ಮಟ್ಟದ ಸಮಾವೇಶದಲ್ಲಿ ಮಾತನಾಡಿದ ಕಾಂತೇಶ್ ಈಶ್ವರಪ್ಪ, ಬಿಜೆಪಿಯಲ್ಲಿ ಎಲ್ಲಾ ಪ್ರಮುಖ ನಾಯಕರ ಮಕ್ಕಳಿಗೆ ಟಿಕೆಟ್ ನೀಡಲಾಗಿದ್ದರೂ ಈಶ್ವರಪ್ಪ ಕುಟುಂಬಕ್ಕೆ ಮಾತ್ರ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ ಅವರ ಗೆಲುವಿನಲ್ಲಿ ಈಶ್ವರಪ್ಪ ಅವರ ಬೆಂಬಲಿಗರೇ ಪ್ರಮುಖ ಪಾತ್ರ ವಹಿಸಿದ್ದರು ಎಂದ ಅವರು, ಮುಂದಿನ ದಿನಗಳಲ್ಲಿ ಬರಬಹುದಾದ ಮಹಾನಗರ ಪಾಲಿಕೆ ಹಾಗೂ ವಿಧಾನಸಭಾ ಚುನಾವಣೆಗಳಲ್ಲಿ ರಾಷ್ಟ್ರಭಕ್ತ ಬಳಗದ ಕಾರ್ಯಕರ್ತರ ನಿರ್ಧಾರದಂತೆ ಅಖಾಡಕ್ಕಿಳಿಯುವುದಾಗಿ ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ