image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮಂಗಳೂರು: ಸೆ.18ರ ಸಚಿವ ಸಂಪುಟ ಸಭೆ; ಸುಳ್ಯ ಕ್ಷೇತ್ರದ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಸಿಎಂಗೆ ಮನವಿ

ಮಂಗಳೂರು: ಸೆ.18ರ ಸಚಿವ ಸಂಪುಟ ಸಭೆ; ಸುಳ್ಯ ಕ್ಷೇತ್ರದ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಸಿಎಂಗೆ ಮನವಿ

ಮಂಗಳೂರು: ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ನಡೆಯಲಿರುವ ಸರ್ಕಾರದ ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ, ಸುಳ್ಯ ವಿಧಾನಸಭಾ ಕ್ಷೇತ್ರದ ಪ್ರಮುಖ ಬೇಡಿಕೆಗಳನ್ನು ಸಂಪುಟ ಸಭೆಯಲ್ಲಿ ಚರ್ಚಿಸಿ ಅನುದಾನ ಬಿಡುಗಡೆಗೊಳಿಸುವಂತೆ ಕೋರಿ ಮಾನ್ಯ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರಿಗೆ ಪ್ರಮುಖ 35 ಬೇಡಿಕೆಗಳ ಮನವಿಯನ್ನು ಸಲ್ಲಿಸಲಾಯಿತು.

ಪ್ರವಾಸೋದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ 1837ರ ಅಮರ ಸುಳ್ಯದ ಸ್ವಾತಂತ್ರ್ಯ ಹೋರಾಟದ ನೆನಪಿಗಾಗಿ 'ಕೆದಂಬಾಡಿ ರಾಮಯ್ಯ ಗೌಡ ಥೀಮ್ ಪಾರ್ಕ್' ನಿರ್ಮಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಇದರೊಂದಿಗೆ, ಸುಳ್ಯ ಕ್ಷೇತ್ರದಲ್ಲಿ ನಿರಂತರ ವಿದ್ಯುತ್ ಪೂರೈಕೆಯನ್ನು ಖಚಿತಪಡಿಸಲು 33 ಕೆ.ವಿ. ವಿದ್ಯುತ್ ಸಂಪರ್ಕವನ್ನು ಭೂಗತ ಲೈನ್ (ಅಂಡರ್‌ಗ್ರೌಂಡ್ ಕೇಬಲ್)ಗಳಾಗಿ ಪರಿವರ್ತಿಸಬೇಕು ಹಾಗೂ ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸಬೇಕು ಎಂಬ ಪ್ರಮುಖ ಬೇಡಿಕೆಗಳನ್ನು ಈ ಮನವಿಯಲ್ಲಿ ಪ್ರಸ್ತಾಪಿಸಲಾಗಿದೆ.

Category
ಕರಾವಳಿ ತರಂಗಿಣಿ