ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಶ್ರೀ ಪದ್ಮರಾಜ್ ಆರ್. ಪೂಜಾರಿ ಅವರನ್ನು ಜಿಲ್ಲಾ ಎನ್‌ಎಸ್‌ಯುಐ (NSUI) ಉಪಾಧ್ಯಕ್ಷರಾದ ಕೀರ್ತನ್ ಗೌಡ ಕೊಡಪಾಲ ಅವರು ಭೇಟಿಯಾಗಿ ಹೂಗುಚ್ಛ ನೀಡಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಎನ್‌ಎಸ್‌ಯುಐ ಸಂಘಟನೆಯ ಪ್ರಮುಖ ಪದಾಧಿಕಾರಿಗಳು ಉಪಸ್ಥಿತರಿದ್ದು ನೂತನ ಅಧ್ಯಕ್ಷರಿಗೆ ಶುಭ ಹಾರೈಸಿದರು. ಪದ್ಮರಾಜ್ ಆರ್. ಪೂಜಾರಿ ಅವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವು ತಳಮಟ್ಟದಲ್ಲಿ ಮತ್ತಷ್ಟು ಬಲಿಷ್ಠವಾಗಿ ಸಂಘಟಿತಗೊಳ್ಳಲಿದೆ ಹಾಗೂ ಜನಪರ ಕಾರ್ಯಗಳ ಮೂಲಕ ಪಕ್ಷವು ಹೊಸ ಚೈತನ್ಯ ಪಡೆದುಕೊಳ್ಳಲಿದೆ ಎಂದು ಈ ವೇಳೆ ವಿಶ್ವಾಸ ವ್ಯಕ್ತಪಡಿಸಲಾಯಿತು.