ಮಂಗಳೂರು: ಕೋಟಾ ಶ್ರೀನಿವಾಸ ಪೂಜಾರಿ ಲೋಕಸಭೆಗೆ ಸ್ಪರ್ಧಿಸಿದ ಕಾರಣ ತೆರವಾಗಿದ್ದ ಉಡುಪಿ-ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ, ಉಪ ಚುನಾವಣೆ ಇಂದು ನಡೆಯಿತು. ಬಿಜೆಪಿಯಿಂದ ಮಂಗಳೂರು ಮಹಾನಗರ ಪಾಲಿಕೆಯಲ್ಲಿರುವ ಮತ ಕೇಂದ್ರದಲ್ಲಿ ಸಂಸದ ಬ್ರಿಜೇಶ್ ಚೌಟ, ಶಾಸಕ ಭರತ್ ಶೆಟ್ಟಿ, ಮನಪಾ ಮೇಯರ್ ಮನೋಜ್, 65 ಮನಪಾ ಸದಸ್ಯರು ಮತದಾನ ಮಾಡಿದರು.