image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಮಾದಕ ದ್ರವ್ಯ ಸಾಗಾಟ ಜಾಲ ನಿಯಂತ್ರಣಕ್ಕೆ ಕಾನೂನು ತಿದ್ದುಪಡಿ ಅಗತ್ಯ -ಡಾ.ಮಂಜುನಾಥ ಭಂಡಾರಿ

ರಾಜ್ಯದಲ್ಲಿ ಮಾದಕ ದ್ರವ್ಯ ಸಾಗಾಟ ಜಾಲ ನಿಯಂತ್ರಣಕ್ಕೆ ಕಾನೂನು ತಿದ್ದುಪಡಿ ಅಗತ್ಯ -ಡಾ.ಮಂಜುನಾಥ ಭಂಡಾರಿ

ಮಂಗಳೂರು: ರಾಜ್ಯದಲ್ಲಿ ಮಾದಕ ಪದಾರ್ಥಗಳ ಮಾರಾಟ ಜಾಲ ನಿಯಂತ್ರಿ ಸಲು ಸೂಕ್ತ ಕಾನೂನು ತಿದ್ದುಪಡಿ ಮಾಡಲು ವಿಧಾನ ಪರಿಷತ್ತಿನಲ್ಲಿ ಪ್ರಸ್ತಾಪಿಸುವುದಾಗಿ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಸುದ್ದಿ ಗೋಷ್ಠಿಯಲ್ಲಿಂದು  ತಿಳಿಸಿದ್ದಾರೆ.

ಈಗಾಗಲೇ ರಾಜ್ಯದಲ್ಲಿ ಮಾದಕ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡ ಬಗ್ಗೆ ಮಾಧ್ಯಮ ಗಳ ವರದಿಗಳ ಆಧಾರದಲ್ಲಿ ರಾಜ್ಯ ಗೃಹ ಸಚಿವರಿಗೆ ಸೂಕ್ತ ಕ್ರಮ ಕೈಗೊಳ್ಳು ವ ಅಗತ್ಯವಿದೆ ಎಂದು ಪತ್ರ ಬರೆದಿರುವು ದಾಗಿ ಮಂಜುನಾಥ ಭಂಡಾರಿ ತಿಳಿಸಿದ್ದಾರೆ.

ಹಾಲಿ ಇರುವ ಕಾಯಿದೆಯಿಂದಮಾದಕ ವಸ್ತುಗಳ ಸಾಗಾಟ ಮತ್ತು ಮಾರಾಟ ಮಾಡುವ ಜಾಲದಲ್ಲಿ ತೊಡಗಿರುವವರು ಪೊಲೀಸರ ಕೈಗೆ ಸಿಕ್ಕಿ ಬಿದ್ದರೂ   ಕಠಿಣ ಶಿಕ್ಷೆ ಇಲ್ಲದೆ ಮತ್ತೆ ಅದೇ ದಂಧೆಯಲ್ಲಿ ತೊಡಗುತ್ತಿರುವ ಕಾರಣ ಇವರನ್ನು ನಿಯಂತ್ರಿಸಲು ಕಠಿಣ ಕಾಯಿದೆಯ ಅಗತ್ಯವಿದೆ ಎಂದು ಡಾ.ಮಂಜುನಾಥ ಭಂಡಾರಿ ತಿಳಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ರಾಜು ಪೂಜಾರಿ, ದ ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಕೆ ಹರೀಶ್ ಕುಮಾರ್, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಅಶೋಕ್ ಕೊಡವುರ್, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯಧ್ಯಕ್ಷರು ಕಿಶನ್ ಹೆಗ್ಡೆ, ಪದ್ಮರಾಜ್ ಆರ್ ಪೂಜಾರಿ, ವಿಕಾಸ್ ಶೆಟ್ಟಿ, ಲಾರೆನ್ಸ್ ಡಿ ಸೋಜ ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ