image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ತುಳು ಭಾಷೆಗೆ ಅಧಿಕೃತ ಸ್ಥಾನಮಾನ: ಕರ್ನಾಟಕ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಭಿನಂದನೆ

ತುಳು ಭಾಷೆಗೆ ಅಧಿಕೃತ ಸ್ಥಾನಮಾನ: ಕರ್ನಾಟಕ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಭಿನಂದನೆ

ಮಂಗಳೂರು: ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಭಾಗದ ಅಭಿವೃದ್ಧಿಗೆ ಹಲವು ಮಹತ್ವದ ಯೋಜನೆಗಳನ್ನು ಪ್ರಕಟಿಸಿ, ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಆಡಳಿತ ಭಾಷೆಯ ಸ್ಥಾನಮಾನ ನೀಡಿರುವ ಕರ್ನಾಟಕ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುತ್ತದೆ ಎಂದು ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ತಿಳಿಸಿದರು.

ನಗರದ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಇಂತಹ ಸಂಪುಟ ಸಭೆಯನ್ನು ಆಯೋಜಿಸಿ ಕರಾವಳಿ ಕರ್ನಾಟಕದ ಅಭಿವೃದ್ಧಿಗೆ ಹೊಸ ಶಕೆ ಆರಂಭಿಸಿದ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಜಿಲ್ಲೆಯ ನಾಯಕರು ಹಾಗೂ ಸಂಪುಟದ ಎಲ್ಲಾ ಸಚಿವರಿಗೆ ಕೃತಜ್ಞತೆ ಸಲ್ಲಿಸುತ್ತೇವೆ.  ದಶಕಗಳಿಂದ ತುಳು ಭಾಷೆಗೆ ಸಾಂವಿಧಾನಿಕ ಮಾನ್ಯತೆ ಸಿಗಬೇಕೆಂದು ನಡೆಸಿದ್ದ ಹೋರಾಟದ ಕನಸನ್ನು ಈ ಸರ್ಕಾರ ಈಡೇರಿಸಿದ್ದು, 
ಈ ಸಂಪುಟ ಸಭೆಯಲ್ಲಿ ಸುಮಾರು ₹32,000 ಕೋಟಿಗೂ ಅಧಿಕ ವೆಚ್ಚದ ಅಭಿವೃದ್ಧಿ ಯೋಜನೆಗಳಿಗೆ ತೀರ್ಮಾನ ಕೈಗೊಳ್ಳಲಾಗಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಕ್ಕೆ ನೂತನ ಪ್ರವಾಸೋದ್ಯಮ ನೀತಿ, ಮಂಗಳೂರಿನ ಕದ್ರಿ ಪಾರ್ಕ್ ಸಮೀಪ ಎತ್ತರದ ಆಕರ್ಷಕ ಟವರ್ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ. ಜೊತೆಗೆ, ಮೂಡುಶೆಡ್ಡೆಯಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ ಹಾಗೂ ಕಿಡ್ವಾಯಿ ಕ್ಯಾನ್ಸರ್ ಆಸ್ಪತ್ರೆಯ ನೂತನ ವಿಭಾಗಗಳ ಸ್ಥಾಪನೆಗೆ ತೀರ್ಮಾನಿಸಿರುವುದು ಜಿಲ್ಲೆಗೆ ದೊರೆತ ಪ್ರಮುಖ ಕೊಡುಗೆಯಾಗಿದೆ ಎಂದು ಅವರು ತಿಳಿಸಿದರು.

ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಮಹಿಳೆಯರ ಜೀವನದಲ್ಲಿ ಸ್ವಾವಲಂಬನೆಯನ್ನು ಮೂಡಿಸಿದ್ದು, ಜಾತಿ, ಮತ ಹಾಗೂ ಧರ್ಮದ ಭೇದವಿಲ್ಲದೆ ದೇವಾಲಯಗಳು, ಮಸೀದಿಗಳು ಮತ್ತು ಚರ್ಚುಗಳ ಅಭಿವೃದ್ಧಿಗೆ ಅನುದಾನ ನೀಡಲಾಗುತ್ತಿದೆ. ಅಭಿವೃದ್ಧಿ ಕಾರ್ಯಗಳನ್ನು ಪರಿಗಣಿಸುವಂತೆ ಮತ್ತು ಸಾಮಾಜಿಕ ಜಾಲತಾಣಗಳ ಅಪಪ್ರಚಾರಗಳಿಗೆ ಕಿವಿಗೊಡದಂತೆ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಸುರೇಖಾ ಚಂದ್ರಹಾಸ್, ಚಂದ್ರಕಲಾ ದೀಪಕ್ ರಾವ್, ಶಾಂತಲಾ ಶೆಟ್ಟಿ, ಅಮಿತಾ ಅಶ್ವಿನ್, ವೃಂದಾ ಪೂಜಾರಿ, ಚಂದ್ರಕಲಾ ಜೋಗಿ, ಚಂದ್ರಿಕಾ ರೈ, ಗೀತಾ ಹಾಗೂ ಸ್ವರೂಪ ಶೆಟ್ಟಿ ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ