image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ದೆಹಲಿಯಲ್ಲಿ ಸಿಜೆಪಿ ಬೃಹತ್ ಪ್ರತಿಭಟನೆ: ರಾಜ್ಯಗಳಿಗೆ ಗೃಹ ಸಚಿವಾಲಯದ ಎಚ್ಚರಿಕೆ

ದೆಹಲಿಯಲ್ಲಿ ಸಿಜೆಪಿ ಬೃಹತ್ ಪ್ರತಿಭಟನೆ: ರಾಜ್ಯಗಳಿಗೆ ಗೃಹ ಸಚಿವಾಲಯದ ಎಚ್ಚರಿಕೆ

ನವದೆಹಲಿ : ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಇಂದು ರಾಷ್ಟ್ರ ರಾಜಧಾನಿ ನವದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ಈ ಹೋರಾಟಕ್ಕೆ ವಿವಿಧ ವಿಪಕ್ಷಗಳು ಬಹಿರಂಗ ಬೆಂಬಲ ವ್ಯಕ್ತಪಡಿಸಿದ್ದು, ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆಯಿದೆ.

ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯವು ತಕ್ಷಣವೇ ಕಾರ್ಯಪ್ರವೃತ್ತವಾಗಿದ್ದು, ಎಲ್ಲಾ ರಾಜ್ಯಗಳಿಗೂ ಮಹತ್ವದ ನಿರ್ದೇಶನ ಹೊರಡಿಸಿದೆ. ನವದೆಹಲಿ ಪ್ರತಿಭಟನೆಗೆ ರಾಜ್ಯಗಳಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಸಿಜೆಪಿ ಕಾರ್ಯಕರ್ತರು ಭಾಗವಹಿಸುವ ಲಕ್ಷಣಗಳಿದ್ದು, ಸ್ಥಳೀಯವಾಗಿ ಈ ಆಂದೋಲನಗಳು ಗಲಭೆ ಅಥವಾ ಕಾನೂನು ಸುವ್ಯವಸ್ಥೆ ಭಂಗಕ್ಕೆ ಕಾರಣವಾಗಬಾರದು ಎಂದು ಕೇಂದ್ರ ಗೃಹ ಸಚಿವಾಲಯದ ಕಾರ್ಯದರ್ಶಿಗಳು ರಾಜ್ಯಗಳಿಗೆ ಸೂಚಿಸಿದ್ದಾರೆ.

ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಸಿಜೆಪಿ ಪ್ರತಿಭಟನೆಗಳನ್ನು ನಿಷೇಧಿಸುವಂತೆ ಮತ್ತು ಪರಿಸ್ಥಿತಿಯ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸುವಂತೆ ಮುನ್ನೆಚ್ಚರಿಕೆ ಆದೇಶ ನೀಡಲಾಗಿದೆ.

Category
ಕರಾವಳಿ ತರಂಗಿಣಿ