image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮೇಲ್ಜಾತಿಯವರ ಓಟು ಬೇಡ ಎಂದ ಶಾಸಕ ಪ್ರದೀಪ್ ಈಶ್ವರ್ ಹೇಳಿಕೆ ವೈರಲ್

ಮೇಲ್ಜಾತಿಯವರ ಓಟು ಬೇಡ ಎಂದ ಶಾಸಕ ಪ್ರದೀಪ್ ಈಶ್ವರ್ ಹೇಳಿಕೆ ವೈರಲ್

ಚಿಕ್ಕಬಳ್ಳಾಪುರ: ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರ ವಿವಾದಾತ್ಮಕ ಹೇಳಿಕೆಯೊಂದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿದೆ.

ಚಿಕ್ಕಬಳ್ಳಾಪುರದಲ್ಲಿ ನಡೆದ ಬೆಂಬಲಿಗರ ಸಭೆಯಲ್ಲಿ ಮಾತನಾಡಿದ ಅವರು, “ನನಗೆ ಮೇಲ್ಜಾತಿಯವರ ಓಟುಗಳು ಬೇಡ, ದಲಿತರು ಮತ್ತು ಅಲ್ಪಸಂಖ್ಯಾತರ ಓಟುಗಳು ಅಷ್ಟೇ ಸಾಕು. ನಾನು ದಲಿತರ ಪರವಾಗಿಯೇ ಇದ್ದೀನಿ ಅಂತ ಅಂದುಕೊಳ್ಳಿ ಬಿಡಿ” ಎಂದು ನೇರವಾಗಿ ಹೇಳಿಕೆ ನೀಡಿದ್ದರು. ಸಭೆಯಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಆಡಿದ ಈ ಮಾತುಗಳ ವಿಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರು ಹಾಗೂ ವಿರೋಧ ಪಕ್ಷಗಳಿಂದ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿದೆ.

ಒಬ್ಬ ಜನಪ್ರತಿನಿಧಿಯಾಗಿ ಸಮಾಜವನ್ನು ಒಗ್ಗೂಡಿಸಿ ಎಲ್ಲ ಸಮುದಾಯಗಳ ಪರವಾಗಿ ಕೆಲಸ ಮಾಡಬೇಕಾದ ಸ್ಥಾನದಲ್ಲಿದ್ದು, ಜಾತಿ ಆಧಾರಿತವಾಗಿ ಈ ರೀತಿ ಬಹಿರಂಗ ಹೇಳಿಕೆ ನೀಡಿರುವುದು ಎಷ್ಟು ಸರಿ ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಎದ್ದಿವೆ. ಶಾಸಕರ ಈ ಹೇಳಿಕೆಯು ಕೇವಲ ಮತಬ್ಯಾಂಕ್ ರಾಜಕಾರಣಕ್ಕೆ ಸಾಕ್ಷಿಯಾಗಿದೆ ಎಂದು ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಈ ವಿವಾದಾತ್ಮಕ ವಿಡಿಯೋ ಕುರಿತು ಶಾಸಕ ಪ್ರದೀಪ್ ಈಶ್ವರ್ ಅವರಿಂದ ಸದ್ಯಕ್ಕೆ ಯಾವುದೇ ಅಧಿಕೃತ ಸ್ಪಷ್ಟನೆ ಹೊರಬಿದ್ದಿಲ್ಲ.

Category
ಕರಾವಳಿ ತರಂಗಿಣಿ