image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಉಪಚುನಾವಣೆಯಲ್ಲಿ ವಿಧಾನಪರಿಷತ್ ಗೆ ಆಯ್ಕೆಯಾದ ಕಿಶೋರ್ ಕುಮಾ‌ರ್ ಪುತ್ತೂರು ಪ್ರಮಾಣ ವಚನ ಸ್ವೀಕಾರ

ಉಪಚುನಾವಣೆಯಲ್ಲಿ ವಿಧಾನಪರಿಷತ್ ಗೆ ಆಯ್ಕೆಯಾದ ಕಿಶೋರ್ ಕುಮಾ‌ರ್ ಪುತ್ತೂರು ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ವಿಧಾನ ಪರಿಷತ್ತಿನ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ವಿಧಾನಪರಿಷತ್ ಗೆ ಆಯ್ಕೆಯಾದ ಕಿಶೋರ್ ಕುಮಾ‌ರ್ ಪುತ್ತೂರು ಅವರು ಪರಿಷತ್‌ನ ನೂತನ ಸದಸ್ಯರಾಗಿ ಇಂದು ಪ್ರಮಾಣವಚನ ಸ್ವೀಕರಿಸಿದರು.

ವಿಧಾನಸೌಧದ ಸಭಾಪತಿ ಕೊಠಡಿಯಲ್ಲಿ  ನಡೆದ ಸರಳ ಸಮಾರಂಭದಲ್ಲಿ ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ  ಪ್ರಮಾಣ ವಚನ ಬೋದಿಸಿದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಶಾಸಕರಾದ ಹರೀಶ್ ಪೂಂಜ, ಡಾ. ಭರತ್‌ ಶೆಟ್ಟಿ, ವೇದವ್ಯಾಸ ಕಾಮತ್, ಭಾಗೀರಥಿ ಮುರುಳ್ಯ ವಿಧಾನ ಪರಿಷತ್‌ ಸದಸ್ಯ ಎನ್. ರವಿಕುಮಾ‌ರ್, ಮಾಜಿ ಶಾಸಕ ಸಂಜೀವ ಮಠಂದೂರು ಮತ್ತಿತರರು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ