image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಶಕ್ತಿ ಯೋಜನೆ ಪರಿಷ್ಕರಣೆ ಪ್ರಸ್ತಾವನೆ ಸರಕಾರದ ಮುಂದೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಶಕ್ತಿ ಯೋಜನೆ ಪರಿಷ್ಕರಣೆ ಪ್ರಸ್ತಾವನೆ ಸರಕಾರದ ಮುಂದೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಅಕ್ಟೋಬರ್ : 'ಶಕ್ತಿ ಯೋಜನೆ ಪರಿಷ್ಕರಣೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ . ಆ ರೀತಿಯ ಉದ್ದೇಶವೂ ಸರ್ಕಾರಕ್ಕೆ ಇಲ್ಲ'  ಎಂದು ಮುಖ್ಯಮಂತ್ರಿಗಳು  ಸ್ಪಷ್ಟಪಡಿಸಿದ್ದಾರೆ. ಅವರು ಇಂದು ವಿದಾನಸೌದದಲ್ಲಿ ಪತ್ರಿಕಾ ಪ್ರತಿನಿಧಿಗಳ ಜೊತೆ ಮಾತನಾಡಿ, ಶಕ್ತಿ ಯೋಜನೆ ಪರಿಷ್ಕರಣೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ . ಆ ರೀತಿಯ ಉದ್ದೇಶವೂ ಸರ್ಕಾರಕ್ಕೆ ಇಲ್ಲಎಂದರು.

 ವಕ್ಫ್ ಆಸ್ತಿ ನೋಟೀಸುಗಳಿಗೆ ಸಂಬಂಧಿಸಿದಂತೆ ನವೆಂಬರ್ 4ರಂದು ಬಿಜೆಪಿ ಪ್ರತಿಭಟನೆ ಮಾಡುವುದರ ಕುರಿತು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸುಮಾರು 200ಕ್ಕೂ ಹೆಚ್ಚು ನೋಟೀಸ್ ಗಳನ್ನು  ನೀಡಿದ್ದಾರೆ. ಅವರದು ಇಬ್ಬಂದಿ ರಾಜಕೀಯ ನಡೆ. ಯಾವ ರೈತರನ್ನೂ ಒಕ್ಕಲೆಬ್ಬಿಸಿಸುವುದಿಲ್ಲ ಎಂದು ಈಗಾಗಲೇ ಹೇಳಿದ್ದೇವೆ. ಕೊಟ್ಟಿರುವ ನೋಟೀಸ್ ಗಳನ್ನು  ಹಿಂಪಡೆಯಲು ಈಗಾಗಲೇ ಸೂಚಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ನವೆಂಬರ್ 4ರ ಅವರ ಪ್ರತಿಭಟನೆ ಉಪ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪ್ರೇರಿತವಾದದ್ದು, ಸಮಸ್ಯೆಗಳು ಇರದೆಡೆ ‌ಸಮಸ್ಯೆಗಳನ್ನು ಸೃಷ್ಟಿಸುತ್ತಾರೆ. ಈಗ ಮುಡಾ ಪ್ರಕರಣದಲ್ಲಿ  ಮಾಡಿಲ್ಲವೇ? ಎಂದು ಪ್ರಶ್ನಿಸಿದರು.

ಇದೇ ಸಂದರ್ಭದಲ್ಲಿ ನಾಡಿನ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೀಪಾವಳಿ ಶುಭಾಶಯಗಳನ್ನು  ತಿಳಿಸಿದರು.

Category
ಕರಾವಳಿ ತರಂಗಿಣಿ