ಚನ್ನಪಟ್ಟಣ: "ಕಾಂಗ್ರೆಸ್ ಸರ್ಕಾರವನ್ನು ಮುಂದಿನ ಎಂಟೂವರೆ ವರ್ಷಗಳ ಕಾಲ ಯಾರೂ ಅಲುಗಾಡಿಸಲು ಆಗುವುದಿಲ್ಲ. ಕುಮಾರಸ್ವಾಮಿ ಮತ್ತೊಂದು ಜನ್ಮ ಎತ್ತಿ ಬಂದರೂ ಏನೂ ಮಾಡಲು ಸಾಧ್ಯವಿಲ್ಲ" ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಹೇಳಿದರು.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎಲೆ ತೋಟದ ಹಳ್ಳಿ, ಅಕ್ಕೂರು ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ಕುಮಾರಸ್ವಾಮಿ ಅವರ ವಿರುದ್ಧ ಸರಣಿ ವಾಗ್ದಾಳಿ ನಡೆಸಿದರು."ಚುನಾವಣೆಗೆ ನಾಲ್ಕೈದು ದಿನವಿರುವಾಗ ಜನರ ಬಳಿಗೆ ಬರುವ ಕುಮಾರಸ್ವಾಮಿ ಅವರೇ ನಿಮ್ಮ ಈ ಧೋರಣೆಯನ್ನು ಇನ್ನೆಷ್ಟು ದಿನ ಮುಂದುವರಿಸಿಕೊಂಡು ಹೋಗುತ್ತೀರಿ" ಎಂದರು.
"18 ಸೀಟು ಇಟ್ಟುಕೊಂಡು ಸರ್ಕಾರ ಮಾಡಲು ಸಾಧ್ಯವೇ? ಬಿಜೆಪಿಯವರು ದಡ್ಡರು, ಕೇವಲ ಎರಡು ಕ್ಷೇತ್ರ ಗೆದ್ದಿರುವುದಕ್ಕೆ ಕೇಂದ್ರದಲ್ಲಿ ಮಂತ್ರಿ ಮಾಡಿದ್ದಾರೆ. ಕಾಂಗ್ರೆಸ್ ನವರಾಗಿದ್ದರೆ ಅವರನ್ನು ಹತ್ತಿರಕ್ಕೂ ಸೇರಿಸುತ್ತಿರಲಿಲ್ಲ. ಈ ಹಿಂದೆ ಅವರ ಸಹವಾಸ ಮಾಡಿ ಅನುಭವಿಸಿದ್ದು ಸಾಕಾಗಿದೆ. ಚುನಾವಣೆ ಸಮೀಪಿಸಲಿ ಆಗ ಆ ಬಗ್ಗೆ ಮಾತನಾಡುತ್ತೇನೆ" ಎಂದು ಹೇಳಿದರು.