ಬೆಂಗಳೂರು : ವಕ್ಫ್ ಆಸ್ತಿ ಒತ್ತುವರಿ ನೆಪದಲ್ಲಿ ರಾಜ್ಯದ ರೈತರ ಭೂಮಿ ಕಬಳಿಸಲು ಸರ್ಕಾರ ಮುಂದಾಗಿದ್ದು ಆಕಸ್ಮಿಕವೂ ಅಲ್ಲ, ಕಣ್ತಪ್ಪಿನ ಕಾರ್ಯವೂ ಅಲ್ಲ.ಇದೊಂದು ವ್ಯವಸ್ಥಿತ ಷಡ್ಯಂತ್ರ ಎಂದು ಮಾಜಿ ಸಚಿವ ವಿ.ಸುನೀಲ್ ಕುಮಾರ್ ಆರೋಪಿಸಿದ್ದಾರೆ.
ಈ ಹಿಂದೆ ರಾಜ್ಯ ಸರ್ಕಾರದ ಅಭಿವೃದ್ಧಿ ಆಯುಕ್ತರಾಗಿದ್ದ ಶಾಲಿನಿ ರಜನೀಶ್ ಅವರು ಕಳೆದ ಏಪ್ರೀಲ್ ತಿಂಗಳಲ್ಲಿ ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು 21767 ಎಕರೆ ವಕ್ಫ್ ಭೂಮಿಯನ್ನು ವಶಪಡಿಸಿಕೊಳ್ಳುವಂತೆ ಸೂಚನೆ ನೀಡಿದ್ದರು. ಈ ಸಂಬಂಧ ಕಂದಾಯ ಹಾಗೂ ವಕ್ಫ್ ಇಲಾಖೆ ಜಂಟಿ ಸಭೆ ನಡೆಸಿತ್ತು.ಸಿದ್ದರಾಮಯ್ಯನವರ ಸೂಚನೆ ಇಲ್ಲದೇ ಅಧಿಕಾರಿಗಳು ಇಂಥ ದರಿದ್ರ ನಿರ್ಣಯ ತೆಗದುಕೊಳ್ಳಲು ಸಾಧ್ಯವಿತ್ತೇ ? ಎಂದು ಪ್ರಶ್ನಿಸಿದ್ದಾರೆ.
ಈಗ ಪರಿಸ್ಥಿತಿ ವಿಕೋಪಕ್ಕೆ ಹೋದ ನಂತರ ಬಿಜೆಪಿಯವರು ಅನಗತ್ಯ ರಾಜಕಾರಣ ನಡೆಸುತ್ತಿದ್ದಾರೆ ಎಂದು ಸಿದ್ದರಾಮಯ್ಯನವರು ಬುರುಡೆ ಬಿಡುತ್ತಿದ್ದಾರೆ. ಇಷ್ಟೆಲ್ಲ ಸ್ಪಷ್ಟೀಕರಣ ನೀಡುವ ಮೊದಲು ಶಾಲಿನಿ ರಜನೀಶ್ ಅವರು ರಾಜೇಂದ್ರ ಕುಮಾರ್ ಕಟಾರಿಯಾ ಅವರಿಗೆ ಪತ್ರ ಬರೆದಿದ್ದು ಸತ್ಯವೋ, ಸುಳ್ಳೋ ಎಂಬುದನ್ನು ನೀವು ಸ್ಪಷ್ಟಪಡಿಸಿ. ಆಗ ನಿಮ್ಮ ಸರ್ಕಾರದ ಜೆಹಾದಿ ನೀತಿ ಬಯಲಾಗುತ್ತದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಟೀಕಿಸಿದ್ದಾರೆ.