ಮಂಗಳೂರು: ಜಗದ್ಗುರು ಶಂಕರಾಚಾರ್ಯ ತೋಟಕಾಚಾರ್ಯ ಎಡನೀರು ಮಠಾಧೀಶ ಶ್ರೀ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿಯವರ ವಾಹನವನ್ನು ಅಡ್ಡಕಟ್ಟಿ ದುಷ್ಕರ್ಮಿಗಳು ಕೇರಳದ ಕಾಸರಗೋಡಿನ ಬೋವಿಕನಾದ ಬಾವಿಕೆರೆ ಎಂಬಲ್ಲಿ ಅಕ್ರಮಣದ ಹೀನ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಬೊಂಡಾಲ ಚಿತ್ತರಂಜನ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂತಹ ದುಷ್ಕೃತ್ಯಗಳು ನಡೆಯದಂತೆ ಕೇರಳ ಸರ್ಕಾರ ಕಾಳಜಿ ವಹಿಸಬೇಕು ಮತ್ತು ತಪ್ಪಿತಸ್ಥರನ್ನು ಬಂಧಿಸಿ, ಶ್ರೀಗಳಿಗೆ ಸೂಕ್ತ ಭದ್ರತೆಯನ್ನು ನೀಡಬೇಕು ಎಂದು ಅಗ್ರಹಿಸಿದ್ದಾರೆ.