ಮಂಗಳೂರು: ಕಾಂಗ್ರೆಸ್ ಸರಕಾರದ ಆಡಳಿತದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಹಾಗೂ ವಕ್ಫ್ ಮಂಡಳಿ ಹೆಸರಿನಲ್ಲಿ ನಡೆಯುತ್ತಿರುವ ವ್ಯಾಪಕ ಭೂಕಬಳಿಕೆ ಪ್ರಕರಣಗಳನ್ನು ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಇಂದು ಮಿನಿ ವಿಧಾನಸೌಧದ ಮುಂದೆ ದಿನವಿಡೀ ಪ್ರತಿಭಟನೆ ಹಾಗೂ ಧರಣಿ ಸತ್ಯಾಗ್ರಹ ನಡೆಸಲಾಯಿತು. ಸಾರ್ವಜನಿಕ ಕಂದಾಯ ಆಸ್ತಿಗಳನ್ನು, ರೈತರ ಜಮೀನುಗಳನ್ನು ಹಾಗೂ ಮಠ-ಮಂದಿರಗಳಿಗೆ ಸೇರಿದ ಸಾವಿರಾರು ವರ್ಷಗಳ ಹಳೆಯ ಸ್ವತ್ತುಗಳನ್ನು ವಕ್ಫ್ ಮಂಡಳಿಗೆ ಸರಕಾರ ನೀಡುತ್ತಿರುವುದನ್ನು ವಿರೋಧಿಸಿ ಪ್ರತಿಪಕ್ಷ ಬಿಜೆಪಿ ರಾಜ್ಯಾದ್ಯಂತ ತೀವ್ರ ಪ್ರತಿಭಟನೆ ನಡೆಸುತ್ತಿದೆ. ಅದರ ಭಾಗವಾಗಿ ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಪ್ರತಿಭಟನೆ ಹಾಗೂ ಧರಣಿ ಸತ್ಯಾಗ್ರಹ ನಡೆಸಲಾಯಿತು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಡಿ. ವೇದವ್ಯಾಸ ಕಾಮತ್, ಡಾ. ವೈ. ಭರತ್ ಶೆಟ್ಟಿ, ಹರೀಶ್ ಪೂಂಜಾ, ಮೇಯರ್ ಮನೋಜ್ ಕುಮಾರ್ ಕೋಡಿಕಲ್, ಉಪ ಮೇಯರ್ ಭಾನುಮತಿ, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಕಿಶೋರ್ ಪುತ್ತೂರು, ಮಾಜಿ ಎಂಎಲ್‌ಸಿ ಬಾಲಕೃಷ್ಣ ಭಟ್, ಪಕ್ಷದ ಹಿರಿಯರಾದ ಮೋನಪ್ಪ ಭಂಡಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಯತೀಶ್ ಅರ್ವಾರ್,
ರಾಜೇಶ್ ಕಾವೇರಿ, ಯುವ ಮೋರ್ಚಾ ಅಧ್ಯಕ್ಷ ನಂದನ್ ಮಲ್ಯ, ಪೂಜಾ ಪೈ, ಪೂರ್ಣಿಮಾ, ಮಾಜಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಮಾಜಿ ಶಾಸಕರಾದ ಸಂಜೀವ ಮಠಂದೂರು, ಪದ್ಮನಾಭ ಕೊಟ್ಟಾರಿ ಹಾಗೂ ಎಲ್ಲ ಕಾರ್ಪೊರೇಟರ್‍ಗಳು, ಮಂಡಲಗಳ ಅಧ್ಯಕ್ಷರು, ವಿವಿಧ ಮೋರ್ಚಾಗಳ ಅಧ್ಯಕ್ಷರು, ಹರಿಕೃಷ್ಣ ಬಂಟ್ವಾಳ, ರವೀಂದ್ರ ಉಳಿದೊಟ್ಟು, ಸಂತೋಷ್ ಕುಮಾರ್ ರೈ ಬೊಳಿಯಾರ್, ಕೇಮಾರು ಮಠದ ಶ್ರೀ ಈಶ ವಿಠಲದಾಸ ಸ್ವಾಮೀಜಿ ಸೇರಿದಂತೆ ನೂರಾರು ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.