image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ವಿದ್ಯಾಸಿರಿ ವಿದ್ಯಾರ್ಥಿವೇತನವನ್ನು ಮುಂದಿನ ವರ್ಷದಿಂದ ಎರಡು ಸಾವಿರಕ್ಕೆ ಏರಿಸಲಾಗುವುದು ಎಂದು ಸಿಎಂ ಭರವಸೆ

ವಿದ್ಯಾಸಿರಿ ವಿದ್ಯಾರ್ಥಿವೇತನವನ್ನು ಮುಂದಿನ ವರ್ಷದಿಂದ ಎರಡು ಸಾವಿರಕ್ಕೆ ಏರಿಸಲಾಗುವುದು ಎಂದು ಸಿಎಂ ಭರವಸೆ

ಮೈಸೂರು : ವಿದ್ಯಾಸಿರಿ ಯೋಜನೆಯಡಿ ಒದಗಿಸುವ ವಿದ್ಯಾರ್ಥಿವೇತನವನ್ನು 1,500 ರೂ.ಗಳನ್ನು ಮುಂದಿನ ವರ್ಷದಿಂದ ಎರಡು ಸಾವಿರಕ್ಕೆ ಏರಿಸಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಸಂತ ಶ್ರೀ ಕನಕದಾಸರ ಜಯಂತ್ಯುತ್ಸವ ಸಮಿತಿ, ಸಿದ್ದಾರ್ಥನಗರ, ಮೈಸೂರು ಇವರ ವತಿಯಿಂದ ಸಿದ್ದಾರ್ಥನಗರದ ಕನಕಭವನದಲ್ಲಿ ಆಯೋಜಿಸಿದ್ದ 'ಶ್ರೀ ಭಕ್ತ ಕನಕದಾಸರ 537ನೇ ಜಯಂತ್ಯುತ್ಸವ ಹಾಗೂ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಈ ಕಾರ್ಯಕ್ರಮಗಳು ಜೀವನದ ಅನುಭವದಿಂದ ಮೂಡಿಬಂದಿದ್ದು. ಪ್ರೌಢಶಾಲೆಗೆ ಬರುವವರೆಗೂ ತಾವು ಚಪ್ಪಲಿಯನ್ನು ಹಾಕಿಕೊಳ್ಳುತ್ತಿರಲಿಲ್ಲ. ಎಲ್ಲಾ ಶಾಲಾ ಮಕ್ಕಳು ಶೂ ಹಾಕಬೇಕೆಂದು ಶೂಭಾಗ್ಯ ಯೋಜನೆಯನ್ನು ಜಾರಿಗೆ ತರಲಾಯಿತು. ರಾಜ್ಯದಲ್ಲಿ ಹೆಚ್ಚುವರಿ ಹಾಲು ಉತ್ಪಾದನೆಯಾದ ಸಂದರ್ಭದಲ್ಲಿ ಶಾಲೆ ಮಕ್ಕಳಿಗೆ ಹಾಲು ಕೊಡಲಾಯಿತು. ಪ್ರಸ್ತುತ ವಾರದಲ್ಲಿ ಆರು ದಿನಗಳು ಶಾಲಾ ಮಕ್ಕಳಿಗೆ ಮೊಟ್ಟೆ ಕೊಡಲಾಗುತ್ತಿದೆ ಎಂದು ಸಿಎಂ ವಿವರಿಸಿದರು.

ಶಕ್ತಿ ಯೋಜನೆಯಡಿ ಎಲ್ಲಾ ಮಹಿಳೆಯರೂ ಉಚಿತವಾಗಿ ಬಸ್ಸುಗಳಲ್ಲಿ ಓಡಾಡುತ್ತಾರೆ. ಗೃಹ ಲಕ್ಷ್ಮೀ ಯೋಜನೆಯಡಿ 1.ಕೋಟಿ 22 ಲಕ್ಷ ಕುಟುಂಬಗಳ ಮನೆ ಯಜಮಾನಿಗೆ ತಿಂಗಳಿಗೆ ಎರಡು ಸಾವಿರ ರೂಪಾಯಿಗಳನ್ನು ನೀಡಲಾಗುತ್ತಿದೆ. ವರ್ಷಕ್ಕೆ 32 ಸಾವಿರ ಕೋಟಿ ಒದಗಿಸಲಾಗುತ್ತಿದೆ ಎಂದರು.

Category
ಕರಾವಳಿ ತರಂಗಿಣಿ