ಮಂಗಳೂರು : ಮಹಾರಾಷ್ಟ್ರದಲ್ಲಿ ಎನ್‌ಡಿಎ ಮೈತ್ರಿ ಕೂಟ ಭರ್ಜರಿ ಜಯ ಗಳಿಸಿರುವುದು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ದೊರೆತ ಮನ್ನಣೆಯಾಗಿದೆ. ಕೇಂದ್ರ ಸರ್ಕಾರ ಹಾಗೂ ಮಹಾರಾಷ್ಟ್ರ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಜನ ಮೆಚ್ಚಿದ್ದು, ಅಭೂತಪೂರ್ವ ಗೆಲುವಿಗೆ ಕಾರಣವಾಗಿದೆ. ಮಹಾರಾಷ್ಟ್ರದಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯ ನಡೆಯಲಿದೆ ಎಂದು ಮಾಜಿ ಸಂಸದ, ಬಿಜೆಪಿಯ ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಅಧಿಕಾರದ ಬಲ ಹಾಗೂ ಹಣ ಬಲದಿಂದ ಕಾಂಗ್ರೆಸ್‌ಗೆ ಗೆಲುವಾಗಿದೆ. ಬಿಜೆಪಿ ಸೋಲಿನ ಬಗ್ಗೆ ಪರಾಮರ್ಶೆ ನಡೆಸುವ ಅಗತ್ಯವಿದೆ ಎಂದು ಅವರು ತಿಳಿಸಿದ್ದಾರೆ.